ಕೊಪ್ಪಳ: ಪತ್ನಿಯ ಕತ್ತು ಹಿಸುಕಿ ಪತಿ ಕೊಲೆಗೈದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರೇಣುಕಾ ಸಂಗಟಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಾಂತರಾಜು ಸಮಿತಿ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ, ಮುಂದಿನ ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿಎಂ
Advertisement
Advertisement
4 ವರ್ಷದ ಹಿಂದೆ ಅನಿಲ ಹಾಗೂ ರೇಣುಕಾ ಮದುವೆಯಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಜೊತೆಗೆ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿ ಅನಿಲ ದಿನನಿತ್ಯ ಕುಡಿದು ಬಂದು ರೇಣುಕಾಳಿಗೆ ಕಿರುಕುಳ ನೀಡ್ತಿದ್ದ ಎಂದು ರೇಣುಕಾ ಕುಟುಂಬಸ್ಥರು ಆರೋಪಿಸಿದ್ದಾರೆ.
Advertisement
ಸ್ಥಳಕ್ಕೆ ಕೊಪ್ಪಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರೇಣುಕಾ ಕುಟುಂಬಸ್ಥರು ಕೊಲೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.ಇದನ್ನೂ ಓದಿ: ಬಾಲಯ್ಯ ನಟನೆಯ ‘ಡಾಕು ಮಹಾರಾಜ್’ ಟ್ರೈಲರ್ ಔಟ್