ನವದೆಹಲಿ: ಚುನಾವಣೋತ್ತರ ಸಮೀಕ್ಷೆ(Exit Polls) ಚರ್ಚೆಯಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ (Congress) ಅಧಿಕೃತವಾಗಿ ತಿಳಿಸಿದೆ.
ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ (Pawan Khera) ಎಕ್ಸ್ನಲ್ಲಿ ಪೋಸ್ಟ್ ಮಾಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಮತ ಚಲಾಯಿಸಿದ್ದು, ತೀರ್ಪು ಭದ್ರವಾಗಿದೆ. ಚುನಾವಣೋತ್ತರ ಸಮೀಕ್ಷೆ ಚರ್ಚೆಯಲ್ಲಿ (Debate) ನಾವು ಭಾಗವಹಿಸುವುದಿಲ್ಲ. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ – ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ
Advertisement
Our statement on the reason for not participating in #ExitPolls
Voters have cast their votes and their verdict has been secured.
The results will be out on 4th June. Prior to that, we do not see any reason to indulge in speculation and slugfest for TRP.
The Indian National…
— Pawan Khera 🇮🇳 (@Pawankhera) May 31, 2024
Advertisement
ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದು ಆಗಿರಬೇಕು. ಆದರೆ ಆರ್ಪಿಗಾಗಿ ಊಹಾಪೋಹ ಮತ್ತು ಸ್ಲಗ್ಫೆಸ್ಟ್ನಲ್ಲಿ ಪಾಲ್ಗೊಳ್ಳಲು ನಮಗೆ ಇಷ್ಟವಿಲ್ಲ ಎಂದು ಬರೆದುಕೊಂಡಿದ್ದಾರೆ.
Advertisement
ಲೋಕಸಭಾ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಮತದಾನ ಶನಿವಾರ ನಡೆಯಲಿದೆ. ನಾಳೆ ಸಂಜೆ 6 ಗಂಟೆಯ ನಂತರ ಮಾಧ್ಯಮಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದೆ.
Advertisement