ಕೊಪ್ಪಳ: ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ ಎಂದು ಕೊಪ್ಪಳದಲ್ಲಿ (Koppala) ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಪಾಲರು (Governor) ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ, ರಾಜ್ಯಪಾಲರ ಕಚೇರಿಯಿಂದಲೇ ಸೋರಿಕೆಯಾಗಿರಬಹುದು. ಇದರ ಬಗ್ಗೆ ತನಿಖೆಯಾಗಲಿ. ಈ ವಿಚಾರ ಮಾಧ್ಯಮಗಳಿಂದ ತಿಳಿದಿದ್ದೇನೆ. ರೀಡೂ ಮಾಡಿ ಎಂದು ಬಿಡಿಎಗೆ ಸುಪ್ರೀಂ ಕೋರ್ಟ್ ಹೇಳಿದೆ ಎಂದರು. ಇದನ್ನೂ ಓದಿ: ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳುವವರಿಗೆ ಕಡಿವಾಣ ಹಾಕಬೇಕು: ಯದುವೀರ್
ಹೈದರಾಬಾದ್ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಷಯಗಳ ಬಗ್ಗೆ ತೀರ್ಮಾನ:
ಕೊಪ್ಪಳ ಜಿಲ್ಲೆಯ ನಗರಸಭೆಯಲ್ಲಿ 8.5 ಕೋಟಿ ಬಾಕಿ ಕಾಮಗಾರಿಗಳ ಬಗ್ಗೆ ಮಾತನಾಡಿ, ಕಲಬುರಗಿಯಲ್ಲಿ (Kalaburagi) ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳಲ್ಲಿ 46 ವಿಷಯಗಳು ಹೈದರಾಬಾದ್(Hyderabad) ಕರ್ನಾಟಕಕ್ಕೆ ಸಂಬಂಧಿಸಿತ್ತು. ಇದರಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ತಜ್ಞರ ವರದಿಯ ಆಧಾರದ ಮೇಲೆ ಟಿಬಿ ಡ್ಯಾಂ ಗೇಟ್‌ಗಳ ನಿರ್ವಹಣೆ: ಸಿಎಂ ಸಿದ್ದರಾಮಯ್ಯ
ಹಾಲಿನ ದರ ಹೆಚ್ಚು ಮಾಡಿದರೆ ಅದು ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲಾಗುವುದು:
ಮಾಗಡಿಯಲ್ಲಿ ಬಹಳ ಶಾಸಕರು, ರೈತರು ಹಸು ಸಾಕಣೆಯ ವೆಚ್ಚ ಹೆಚ್ಚಾಗಿದ್ದು ಹಾಲಿನ ದರ ಹೆಚ್ಚಳ ಮಾಡಲು ಒತ್ತಾಯ ಮಾಡಿದರು. ಒಂದು ವೇಳೆ ಹಾಲಿನ ದರ ಹೆಚ್ಚಿಸುವ ಬಗ್ಗೆ ತೀರ್ಮಾನವಾದರೆ ಅದನ್ನು ಸಂಪೂರ್ಣವಾಗಿ ರೈತರಿಗೆ ಕೊಡಬೇಕೆಂದು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ
ಮುನಿರತ್ನ ಅವರಿಂದ ಸುಳ್ಳು ಆರೋಪ:
ಶಾಸಕ ಮುನಿರತ್ನ (Muniratna) ಅವರು ಸರ್ಕಾರ ಬಂಧಿಸಿರುವುದು ಕಿರುಕುಳ ನೀಡಲು ಹಾಗೂ ನನ್ನ ಆಪ್ತ ಬಳಗಕ್ಕೆ ಕಿರುಕುಳ ನೀಡಿ ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ನಾವು ಯಾರ ಮೇಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅಪರಾಧ ಮಾಡಿ ಎಂದು ನಾವು ಯಾರಿಗೂ ಹೇಳಿಲ್ಲ. ಶಾಸಕರು ನನ್ನನ್ನು ಭೇಟಿ ಮಾಡಿ ಎಸ್‌ಐಟಿ ರಚಿಸಲು ಕೋರಿದರು. ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದೆ. ತಪ್ಪು ಮಾಡಿದರೆ ತಾನೇ ಎಫ್‌ಐಆರ್ ಆಗುವುದು. ನಾವು ಯಾರಿಗೂ ಕಿರುಕುಳ ನೀಡಿ ಕೇಸು ದಾಖಲಿಸಿಲ್ಲ. ಈ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್