ತುಮಕೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ (MUDA Scam) ಹಾಗೂ ಕೋವಿಡ್ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರದ ಜಲ್ ಜೀವನ್ ಮೀಷನ್ ಯೋಜನೆಯಲ್ಲೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ.
ಜಲ ಜೀವನ್ ಮಿಷನ್ (JJM) ಯೋಜನೆಯಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸದ 116 ಕಾಮಗಾರಿಗಳ ಟೆಂಡರ್ ಹಣವನ್ನು ಈವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ
Advertisement
Advertisement
ಜೆಜೆಎಂ ಯೋಜನೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಸ್ಪಷ್ಟನೆ ನೀಡಿದ್ದಾರೆ. ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: MUDA Scam | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ – ಕೋವಿಡ್ ಹಗರಣ ವರದಿಗೆ ಉತ್ತರ ಕೊಡ್ತೇವೆ: ಬೊಮ್ಮಾಯಿ
Advertisement
Advertisement
ಜೆಜೆಎಂ ಯೋಜನೆಯಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ನಿರ್ವಹಿಸಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಬಂದ ನಂತರ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರುಗಳ ನೇತೃತ್ವದ ತಂಡ ತುಮಕೂರು, ಕೊರಟಗೆರೆ ತಾಲ್ಲೂಕಿಗೆ ಭೇಟಿನೀಡಿ ಪರಿಶೀಲನೆ ನಡೆಸಿದೆ. ತನಿಖೆಯ ವರದಿ ಆಧಾರದ ಮೇಲೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮದುವೆಯಾಗೋದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ವಶಕ್ಕೆ