ಪಾಟ್ನಾ: ಪ್ರಧಾನಿ ಮೋದಿ (PM Narendra Modi) ಅವರನ್ನು ಸೋಲಿಸಲು ವಿಪಕ್ಷಗಳನ್ನು ಸೇರಿಸುತ್ತಿರುವ ನಿತೀಶ್ ಕುಮಾರ್ (Nitish Kumar) ಅವರಿಗೆ ಶಾಕ್ ನೀಡಲು ಮುಂದಾಗಿದ್ಯಾ ಹೀಗೊಂದು ಪ್ರಶ್ನೆ ಎದ್ದಿದೆ.
ಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ (Ajit Pawar) ಅವರ ಬಂಡಾಯದ ನಂತರ ಬಿಹಾರದಲ್ಲಿ (Bhiar) ಅದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬಿಜೆಪಿಯ ನಾಯಕ ಸುಶೀಲ್ ಮೋದಿ (Sushil Modi) ಹೇಳಿದ್ದರಿದ ಈ ಪ್ರಶ್ನೆ ಈಗ ಎದ್ದಿದೆ. ಇದನ್ನೂ ಓದಿ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಜನತಾ ದಳ ಯುನೈಟೆಡ್ (JDU) ಹಲವಾರು ಸಂಸದರು ಮತ್ತು ಶಾಸಕರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ನಿತೀಶ್ ಕುಮಾರ್ ಅವರ ಪಕ್ಷವು ವಿಭಜನೆಯ ಅಂಚಿನಲ್ಲಿದೆ. ಮುಂದಿನ ದಿನಗಳಲ್ಲಿ ಏನು ಬೇಕಾದರೂ ಸಾಧ್ಯ ಎಂದು ಅವರು ಹೇಳಿದರು.
ಜೆಡಿಯು ಬಂಡಾಯ ಸದಸ್ಯರನ್ನು ಒಪ್ಪಿಕೊಳ್ಳುವ ಬಗ್ಗೆ ಪಕ್ಷ ಇನ್ನೂ ನಿರ್ಧರಿಸಿಲ್ಲ. ಬಿಜೆಪಿ ವಿರುದ್ಧ ಮುನಿಸಿಕೊಂಡ ನಿತೀಶ್ ಕುಮಾರ್ ವಿರುದ್ಧ ಜೆಡಿಯು ಪಕ್ಷದ ಸದಸ್ಯರ ಅಸಮಾಧಾನ ಹೊಂದಿದ್ದಾರೆ ಎಂದು ತಿಳಿಸಿದರು.
ಕಳೆದ ಚುನಾವಣೆಯಲ್ಲಿ ಜೆಡಿಯು 17 ಸ್ಥಾನ ಪಡೆದಿತ್ತು.ಇಂದಿನ ಪರಿಸ್ಥಿತಿಯಲ್ಲಿ ಜೆಡಿಯು 8-10ಕ್ಕಿಂತ ಹೆಚ್ಚು ಸ್ಥಾನ ಪಡೆಯುವ ಅವಕಾಶವಿಲ್ಲ. ಈ ಕಾರಣಕ್ಕೆ ಸಂಸದರು, ಶಾಸಕರು ಬೇರೆ ಪಕ್ಷಗಳನ್ನು ಸಂಪರ್ಕಿಸುತ್ತಿದ್ದಾರೆ ಎಂದರು.
ನಿತೀಶ್ ಸಭೆ:
ಮಹಾರಾಷ್ಟ್ರ ಬೆಳವಣಿಗೆಯ ಬಳಿಕ ನಿತೀಶ್ ಕುಮಾರ್ ಜೆಡಿಯು ಶಾಸಕರು, ಸಂಸದರು, ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Web Stories