– ಜೆಡಿಎಸ್ ಸಂಭಾವ್ಯ ಕ್ಷೇತ್ರ, ಅಭ್ಯರ್ಥಿಗಳ ಲಿಸ್ಟ್
ನವದೆಹಲಿ: ಲೋಕಸಭಾ ಚುನಾವಣೆಗೆ (Loksabha Elections 2024) ಕರ್ನಾಟಕ, ಆಂಧ್ರ ಸೇರಿ ವಿವಿಧ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರು ಮಾಡಲು ಬಿಜೆಪಿ ಹೈಕಮಾಂಡ್ ಕಸರತ್ತು ನಡೆಸಿದೆ. ಎರಡನೇ ಪಟ್ಟಿ (BJP 2nd List) ಬಿಡುಗಡೆ ಸಂಬಂಧ ಬುಧವಾರ ತಡರಾತ್ರಿವರೆಗೂ ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆದಿದೆ.
ಕರ್ನಾಟಕಕ್ಕೆ ಸಂಬಂಧಿಸಿ ಎಲ್ಲಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾದ ಸ್ಥಾನಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೂರು ರಿಪೋರ್ಟ್‍ಗಳನ್ನು ಮುಂದಿಟ್ಟುಕೊಂಡು ಕ್ಷೇತ್ರವಾರು ಸಮೀಕ್ಷೆಗಳನ್ನು ತಾಳೆ ಹಾಕಲಾಗಿದೆ. ಪ್ರತಿ ಕ್ಷೇತ್ರದ ಬಗ್ಗೆ ರಾಜ್ಯ ನಾಯಕರ ಅಭಿಪ್ರಾಯ ಪಡೆಯಲಾಗಿದೆ. ಮಾತುಕತೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇಂದು ಕೂಡ ಬಿಜೆಪಿ ಹೈಕಮಾಂಡ್ ಸಭೆ ನಡೆಸಿದೆ. ಆದರೆ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಯಾರಿಗೆ ಕೊಕ್ ನೀಡಲಾಗುತ್ತೆ. ಯಾರಿಗೆ ಮತ್ತೆ ಟಿಕೆಟ್ ಸಿಗುತ್ತೆ ಎಂಬ ಗುಟ್ಟನ್ನು ಅಮಿತ್ ಶಾ (Amitshah) ಬಿಟ್ಟುಕೊಟ್ಟಿಲ್ಲ.
Advertisement
Advertisement
ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸಂಸದೆ ಸುಮಲತಾ ಸ್ಪರ್ಧೆ ರಹಸ್ಯವೂ ಅನಾವರಣಗೊಂಡಿಲ್ಲ. ಸದ್ಯಕ್ಕೆ ಎಲ್ಲವೂ ಸಸ್ಪೆನ್ಸ್ ಆಗಿದೆ. ನಾಳೆ ಬಿಜೆಪಿಯ ಚುನಾವಣಾ ಸಮಿತಿ ಸಭೆಯ ಬಳಿಕ ಎರಡನೇ ಪಟ್ಟಿ ರಿಲೀಸ್ ಆಗೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ರಾಜ್ಯದ ಕೆಲ ನಾಯಕರ ಬಗ್ಗೆ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೇಳೋಕೆ ಸಾಕಷ್ಟಿದೆ. ಆದರೆ ಹೇಳಲು ಸಮಯ ಇದಲ್ಲ. ಲೋಕಸಭೆ ಚುನಾವಣೆ ಮುಗಿಯಲಿ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: BJP Lok Sabha Candidates: ಮೊದಲ ಪಟ್ಟಿಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಸೀಟು?
Advertisement
ಯಾರಿಗೆ ಕೊಕ್ ಸಾಧ್ಯತೆ?: ಶ್ರೀನಿವಾಸ್ ಪ್ರಸಾದ್ (ಚಾಮರಾಜನಗರ), ದೇವೇಂದ್ರಪ್ಪ (ಬಳ್ಳಾರಿ), ಮಂಗಳಾ ಅಂಗಡಿ (ಬೆಳಗಾವಿ), ಜಿಎಸ್ ಬಸವರಾಜು (ತುಮಕೂರು), ಶಿವಕುಮಾರ್ ಉದಾಸಿ (ಹಾವೇರಿ), ರಮೇಶ್ ಜಿಗಜಿಣಗಿ (ವಿಜಯಪುರ) ಸಂಗಣ್ಣ ಕರಡಿ (ಕೊಪ್ಪಳ), ನಾರಾಯಣಸ್ವಾಮಿ (ಚಿತ್ರದುರ್ಗ), ರಾಜಾ ಅಮರೇಶ್ವರ ನಾಯಕ್ (ರಾಯಚೂರು)
Advertisement
ವೇಯ್ಟಿಂಗ್ ಲಿಸ್ಟ್: ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮಾಜಿ ಸಚಿವರುಗಳಾದ ಡಾ.ಕೆ.ಸುಧಾಕರ್, ಸಿ.ಟಿ.ರವಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ.
ಸಸ್ಪೆನ್ಸ್ ಲಿಸ್ಟ್: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್‍ಕಟೀಲ್, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಮಂಡ್ಯ ಸಂಸದೆ ಸುಮಲತಾ.
ಇತ್ತ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ದೋಸ್ತಿ ಪಕ್ಷ ಜೆಡಿಎಸ್‍ಗೆ (JDS) ಮೂರು ಮತ್ತೊಂದು ಸ್ಥಾನಗಳನ್ನು ನೀಡಲು ಬಿಜೆಪಿ ಮುಂದಾಗಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್ ಪಾಲಾಗುವ ಸಂಭವ ಹೆಚ್ಚಿದೆ. ಈ ಬಗ್ಗೆ ಬಿಜೆಪಿ ಸಿಇಸಿ ಸಭೆಯಲ್ಲಿ ಚರ್ಚೆ ನಡೆದಿದೆ. ವಿಶೇಷ ಅಂದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಈ ಕ್ಷೇತ್ರದ ನಾಯಕರೊಂದಿಗೆ ಕುಮಾರಸ್ವಾಮಿ ಮೇಲಿಂದ ಮೇಲೆ ಸಭೆಗಳನ್ನು ಮಾಡಿದ್ದಾರೆ. ಯಾರಿಗೆ ಟಿಕೆಟ್ ಸಿಕ್ಕಿದ್ರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮುಖಂಡರಿಗೆ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಜೆಡಿಎಸ್ ಸಂಭಾವ್ಯ ಕ್ಷೇತ್ರ ಹಾಗೂ ಅಭ್ಯರ್ಥಿಗಳು:
* ಮಂಡ್ಯ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ, ಮಾಜಿ ಸಚಿವ ಸಿಎಸ್ ಪುಟ್ಟರಾಜು
* ಹಾಸನ: ಪ್ರಜ್ವಲ್ ರೇವಣ್ಣ, ಸಂಸದ
* ಕೋಲಾರ: ಶಾಸಕ ಸಮೃದ್ಧಿ ಮಂಜುನಾಥ್, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ.
* ಬೆಂಗಳೂರು (ಗ್ರಾ): ವೈದ್ಯ ಡಾ. ಸಿಎನ್ ಮಂಜುನಾಥ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ