ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಥಿಯೇಟರ್ ನಲ್ಲಿ ಹಲವು ದಾಖಲೆಗಳನ್ನು ಬರೆದಿತ್ತು. ಅತೀ ಕಡಿಮೆ ವೆಚ್ಚದಲ್ಲಿ ತಯಾರಾಗಿದ್ದ ಈ ಚಿತ್ರವು ದಾಖಲೆಯ ರೀತಿಯಲ್ಲಿ ಬಾಕ್ಸ್ ಆಫೀಸಿನಲ್ಲಿ ಕಮಾಲ್ ಮಾಡಿತ್ತು. ಇದೀಗ ಓಟಿಟಿಯಲ್ಲೂ ಸಿನಿಮಾ ರಿಲೀಸ್ ಆಗಿದ್ದು, ಅಲ್ಲಿಯೂ ಕೂಡ ಸಖತ್ ಸದ್ದು ಮಾಡಿದೆ. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್
Advertisement
ಜೀ 5 ಓಟಿಟಿ ವೇದಿಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದ್ದು, ವಾರಾಂತ್ಯಕ್ಕೆ 90 ಲಕ್ಷ ಜನರು ಈ ಸಿನಿಮಾವನ್ನು ವೀಕ್ಷಿಸಿದ್ದಾರಂತೆ. 3 ಕೋಟಿ ನಿಮಿಷ ವೀಕ್ಷಣೆ ಪಡೆದಿದೆ ಎನ್ನಲಾಗುತ್ತಿದೆ. ಈ ಓಟಿಟಿ ವೇದಿಕೆಯಲ್ಲಿ ಇದೇ ಮೊದಲ ಬಾರಿಗೆ ಈ ಪ್ರಮಾಣದಲ್ಲಿ ವೀಕ್ಷಣೆ ಪಡೆದ ಮೊದಲ ಸಿನಿಮಾ ಇದಾಗಿದೆಯಂತೆ. ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್
Advertisement
Advertisement
ವಿವೇಕ್ ಅಗ್ನಿಹೋತ್ರಿ ಈ ಸಿನಿಮಾದ ನಿರ್ಮಾಣಕ್ಕೆ ಮುಂದಾದಾಗ ಹಾಕಿಕೊಂಡ ಬಜೆಟ್ ಕೇಲವ ಹತ್ತು ಕೋಟಿಯಂತೆ. ಆನಂತರ 15 ಕೋಟಿ ಖರ್ಚಾಗಿದೆ. ಆದರೆ, ಥಿಯೇಟರ್ ನಿಂದ ಬಂದದ್ದು, 250 ಕೋಟಿಗೂ ಹೆಚ್ಚು. ಅಲ್ಲದೇ, ಓಟಿಟಿ ಕೂಡ ಕೋಟಿ ಕೋಟಿ ಲೆಕ್ಕದಲ್ಲೇ ಹಕ್ಕುಗಳನ್ನು ಖರೀದಿಸಿದೆ. ಹೀಗಾಗಿ ಈ ಮಾದರಿಯ ಸಿನಿಮಾಗಳಲ್ಲಿ ಅತೀ ಹೆಚ್ಚು ಸಂಪಾದಿಸಿದ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಇದನ್ನೂ ಓದಿ : ನಾಲ್ಕೈದು ವರ್ಷ ಪ್ರಶಾಂತ್ ನೀಲ್ ತೆಲುಗಿನಲ್ಲೇ ಲಾಕ್ : ಮತ್ತೆ ರಕ್ತದ ಹಿಂದೆ ಬಿದ್ದ ಕೆಜಿಎಫ್ ಡೈರೆಕ್ಟರ್
Advertisement
ಥಿಯೇಟರ್ನಲ್ಲಿ ಈ ಸಿನಿಮಾ ರಿಲೀಸ್ ಆದಾಗ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರ ಬಿಡುಗಡೆ ಆಗಿತ್ತು. ಓಟಿಟಿಯಲ್ಲಿ ತೆಲುಗು, ತಮಿಳು, ಹಿಂದಿ, ಕನ್ನಡ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಹಾಗಾಗಿ ನೋಡುಗರ ಸಂಖ್ಯೆ ಸಹಜವಾಗಿ ಹೆಚ್ಚಾಗಿದೆ.