ಮೊನ್ನೆಯಷ್ಟೇ ಕೇಂದ್ರ ಸರಕಾರ 69ನೇ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಿತ್ತು. ಈ ಪ್ರಶಸ್ತಿಗಳ ಬಗ್ಗೆ ಬಾಲಿವುಡ್ ನಟ ಅನುಪಮ್ ಖೇರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ (The Kashmir Files) ಚಿತ್ರದ ನಟನೆಗಾಗಿ ತಮಗೆ ರಾಷ್ಟ್ರ ಪ್ರಶಸ್ತಿ (National Award) ಬರಬೇಕಿತ್ತು ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು ಘೋಷಣೆಯಾಗಿವೆ. ಚಿತ್ರಕ್ಕೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಸಂದಿದ್ದರೆ, ಈ ಸಿನಿಮಾದ ನಟನೆಗಾಗಿ ಅತ್ಯುತ್ತಮ ಪೋಷಕಿ ನಟಿ ಪ್ರಶಸ್ತಿ ಕೂಡ ಚಿತ್ರ ಪಡೆದುಕೊಂಡಿದೆ. ಆದರೆ, ಅನುಪಮ್ ಖೇರ್ (Anupam Kher) ಅವರಿಗೆ ಈ ಸಿನಿಮಾದ ನಟನೆಗಾಗಿ ಪ್ರಶಸ್ತಿ ಬರಬೇಕಿತ್ತು ಎನ್ನುವುದು ನಟನ ವಾದ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ರಾಷ್ಟ್ರೀಯ ಭಾವೈಕ್ಯತಾ ಪ್ರಶಸ್ತಿ ಬಂದಿರುವುದಕ್ಕೆ ತಮಿಳು ನಾಡು ಮುಖ್ಯಮಂತ್ರಿ ಸ್ಟಾಲಿನ್ ಟೀಕೆ ಮಾಡಿದ್ದರು. ಭಾವೈಕ್ಯತೆಯನ್ನು ಹಾಳು ಮಾಡುವ ಚಿತ್ರಕ್ಕೆ ಅಂಥದ್ದೊಂದು ಪ್ರಶಸ್ತಿ ಕೊಟ್ಟಿರುವುದಕ್ಕೆ ಅವರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಅಲ್ಲದೇ, ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಕೂಡ ಅಸಮಾಧಾನ ಹೊರ ಹಾಕಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]