BollywoodCinemaLatestMain Post

‘ದಿ ಕಾಶ್ಮೀರ್ ಫೈಲ್ಸ್’ ಹಲವು ದೇಶಗಳಲ್ಲಿ ಬ್ಯಾನ್ : ಭಾರತದ ಹೆಸರು ಕೆಡಿಸುವ ಹುನ್ನಾರ ಎಂದ ನಿರ್ದೇಶಕ

Advertisements

ಭಾರತದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಯಶಸ್ವಿ ಪ್ರದರ್ಶನ ಕಂಡಿದೆ. ಬಾಕ್ಸ್ ಆಫೀಸಿನಲ್ಲೂ ಕೂಡ ಕೋಟಿ ಕೋಟಿ ಲೂಟಿ ಮಾಡಿದೆ. ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳು ಈ ಚಿತ್ರಕ್ಕಾಗಿ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದವು. ಅಲ್ಲದೇ ಕರ್ನಾಟಕ ಸರ್ಕಾರದ ಹಲವು ಮಂತ್ರಿಗಳು ಈ ಸಿನಿಮಾದ ವಿಶೇಷ ಪ್ರದರ್ಶನ ಕೂಡ ಏರ್ಪಡಿಸಿದ್ದರು. ಆದರೆ ಹಲವು ದೇಶಗಳಲ್ಲಿ ಈ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ.

ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಪುರ್ ಬ್ಯಾನ್ ಮಾಡಿತ್ತು. ಇದರ ಬೆನ್ನಲ್ಲೇ ಅರಬ್ ದೇಶಗಳು ಕೂಡ ಈ ಸಿನಿಮಾವನ್ನು ತಮ್ಮ ಪ್ರಜೆಗಳಿಗೆ ತೋರಿಸಲು ಹಿಂದೇಟು ಹಾಕಿವೆ. ಅಲ್ಲದೇ, ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಕೂಡ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಭಾಷಣಗಳಿಗೆ ಬ್ರೇಕ್ ಹಾಕಿವೆ. ಈ ಕುರಿತು ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಿಡಿಕಾರಿದ್ದಾರೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

ಸತ್ಯವನ್ನು ಹೇಳುವುದೇ ತಪ್ಪು ಅನ್ನುವಂತಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದೇನೆ. ಕಾಶ್ಮೀರಿ ಪಂಡಿತರಿಗೆ ಆದ ಅನ್ಯಾಯವನ್ನು ಚಿತ್ರದಲ್ಲಿ ತೆರೆದಿಟ್ಟಿದ್ದೇನೆ. ಹಾಗಾಗಿ ಈ ಸಿನಿಮಾವನ್ನು ಬೇರೆ ಬೇರೆ ದೇಶಗಳಲ್ಲಿ ತೋರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದು ಭಾರತದ ಹೆಸರನ್ನು ಕೆಡಿಸುವ ಹುನ್ನಾರ ಎಂದು ಅವರು ಮಾತನಾಡಿದ್ದಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published.

Back to top button