ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಶ್ಮೀರ ಪಂಡಿತರ ಮಾರಣಹೋಮ ಘಟನೆ ಕುರಿತಾದ ಸಿನಿಮಾ ಇದಾಗಿದ್ದು, ಚಿತ್ರದ ಬಗ್ಗೆ ಪರ ಮತ್ತು ವಿರೋಧಗಳು ಕೇಳಿ ಬರುತ್ತಿವೆ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್
Advertisement
ಒಂದು ಸಮುದಾಯದ ಓಲೈಕೆಗಾಗಿ ಮಾಡಿದ ಸಿನಿಮಾ ಇದು ಎಂದು ಕೆಲವರು ವಾದಿಸಿದರೆ, ಕಾಶ್ಮೀರಿ ಪಂಡಿತರ ವಸ್ತುಸ್ಥಿತಿಯ ಬಗ್ಗೆ ಮುಖಕ್ಕೆ ಹೊಡೆದಂತೆ ನಿರ್ದೇಶಕರು ಹೇಳಿದ್ದಾರೆ ಎನ್ನುವುದು ಮತ್ತೊಂದು ವಾದ. ಈ ವಾದ ವಿವಾದ ಏನೇ ಇರಲಿ, ಈ ಚಿತ್ರದಲ್ಲಿ ಕನ್ನಡದ ಹೆಸರಾಂತ ನಟ, ಪತ್ರಕರ್ತ ಪ್ರಕಾಶ್ ಬೆಳವಾಡಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ತಾವು ಏಕೆ ನಟಿಸಲು ಒಪ್ಪಿಕೊಂಡೆ ಅನ್ನುವ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ : ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್
Advertisement
Advertisement
“ಕಾಶ್ಮೀರಿ ಪಂಡಿತರ ಮಾರಣಹೋಮ ನಡೆದಾಗ ನಾನು ಪತ್ರಕರ್ತನಾಗಿದ್ದೆ. ಆ ಸಮಯದಲ್ಲಿ ನಿಜವಾಗಿಯೂ ಅಲ್ಲಿ ಏನು ನಡೆಯಿತು ಎಂದು ತಿಳಿದಿರಲಿಲ್ಲ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನನಗೆ ಸಿನಿಮಾದ ಚಿತ್ರಕಥೆ ಕಳುಹಿಸಿದಾಗ ಗಾಬರಿ ಆಯಿತು. ತಿಳಿದುಕೊಂಡಿರುವ ಇತಿಹಾಸವೇ ಬೇರೆ, ಆಗಿರುವ ಘಟನೆಯೇ ಬೇರೆಯಾಗಿತ್ತು. ಹಾಗಾಗಿ ನಾನು ಆ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆ’ ಎಂದಿದ್ದಾರೆ ಪ್ರಕಾಶ್ ಬೆಳವಾಡಿ. ಇದನ್ನೂ ಓದಿ : ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ
Advertisement
“ಈ ಸಮಾಜದ ಪರವಾಗಿ ನಾನು ಕಾಶ್ಮೀರಿ ಪಂಡಿತರಿಗೆ ಕ್ಷಮೆ ಕೇಳಬೇಕು. ನಾನು ಅಪರಾಧಿ ಭಾವದಲ್ಲಿದ್ದೇನೆ. ಒಬ್ಬ ಪತ್ರಕರ್ತನಾಗಿಯೂ ನನಗೆ ನಿಜವಾದ ಇತಿಹಾಸವನ್ನು ಜನರಿಗೆ ತಿಳಿಸುವುದಕ್ಕೆ ಆಗಲಿಲ್ಲ. ಆ ಅಪರಾಧಿ ಭಾವದಿಂದಲೇ ಆ ಸಿನಿಮಾದಲ್ಲಿ ನಟಿಸಿದೆ. ಈ ಸಿನಿಮಾದ ಮೂಲಕವಾದರೂ, ನನ್ನ ಅಪರಾಧಿ ಭಾವವನ್ನು ಕಡಿಮೆ ಮಾಡಿಕೊಳ್ಳುತ್ತೇನೆ’ ಎನ್ನುವುದು ಅವರ ಮಾತು. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ
ಈ ಸಿನಿಮಾದ ಮೂಲಕ 1990ರಲ್ಲಿ ನಡೆದ ಕ್ರೂರ ಘಟನೆಯ ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಹಲವು ವರ್ಷಗಳ ಕಾಲ ಘಟನೆಯ ಬಗ್ಗೆ ಸಂಶೋಧನೆ ಮಾಡಿ, ಸಂದರ್ಶಿಸಿ ಚಿತ್ರಕಥೆ ಹೆಣೆದಿದ್ದಾರಂತೆ. ಅನುಪಮ್ ಖೇರ್, ಪಲ್ಲವಿ ಜೋಸಿ, ಮಿಥುನ್ ಚಕ್ರವರ್ತಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಚಕ್ಡಾ ಎಕ್ಸ್ ಪ್ರೆಸ್ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್
ಈ ಸಿನಿಮಾದ ಕುರಿತಂತೆ ಈಗಾಗಲೇ ಜಮ್ಮು ಕಾಶ್ಮೀರ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಈ ಸಿನಿಮಾದಲ್ಲಿ ಸ್ಕ್ವಾಡ್ರನ್ ಲೀಡರ್ ರವಿ ಖನ್ನಾ ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪಾತ್ರ ತೋರಿಸಲಾಗಿದೆ ಎಂದು ರವಿ ಖನ್ನಾ ಪತ್ನಿ ದೂರು ದಾಖಲಿಸಿದ್ದಾರೆ.