– ಮೋದಿ ಒಳ್ಳೆಯ ಪರಿಕಲ್ಪನೆ ಜಾರಿಗೆ ತಂದಿದ್ದಾರೆ
ಚಾಮರಾಜನಗರ: ದೇಶಾದ್ಯಂತ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಎಲ್ಲ ರಾಜಕೀಯ ಮುಖಂಡರು ನೋಡುತ್ತಿದ್ದು, ಸಿನಿಮಾ ನೋಡಬೇಕೆಂದು ಜನರಿಗೆ, ನೌಕರರಿಗೆ ಉತ್ತೇಜನವನ್ನು ಕೊಡುತ್ತಿದ್ದಾರೆ. ಅಂತೆಯೇ ಇದೀಗ ಸಚಿವ ವಿ. ಸೋಮಣ್ಣ ಕೂಡ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಚ್ಚಿ ಹೋಗಿರುವ ಇತಿಹಾಸವನ್ನು ಜನರಿಗೆ ತಿಳಿಸಿಕೊಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಅಂತಹ ಘಟನೆಗಳು ನಡೆಯಬಾರದು ಎಂಬ ದೃಷ್ಟಿಯಿಂದ ಈ ಚಿತ್ರ ತಯಾರಾಗಿದೆ. ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ
Advertisement
Advertisement
ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ನಾನೊಬ್ಬ ಎಲ್ ಬೋರ್ಡ್. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಪಠ್ಯ ಪುಸ್ತಕ ರಚನೆಗೆ ಸಮಿತಿಯಿದೆ. ಸಮಿತಿ ಅವರು ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ತಾರೆ. ಮುಂದಿನ ಪೀಳಿಗೆಗೆ ಏನು ತಿಳಿಸಬೇಕು ಎಂಬುದರ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.
Advertisement
ವಂಶ ರಾಜಕಾರಣ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಪ್ರಧಾನಿ ಮೋದಿ ಒಳ್ಳೆಯ ಪರಿಕಲ್ಪನೆ ಜಾರಿಗೆ ತಂದಿದ್ದಾರೆ. ನನ್ನ ಮಗನಿಗೆ ಅದೃಷ್ಟ ಇದ್ರೆ ಶಾಸಕನಾಗುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಫ್ಯಾಮಿಲಿ ಪಾಲಿಟಿಕ್ಸ್‌ಗೆ ಬೀಳುತ್ತಾ ಬ್ರೇಕ್..?