ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇಂತಹ ಅಶ್ಲೀಲ, ಕೆಟ್ಟ ಸಿನಿಮಾವನ್ನು ನಾನು ಯಾವತ್ತೂ ಜ್ಯೂರಿಯಾಗಿ ನೋಡಿಲ್ಲ ಎಂದು ಕಾಮೆಂಟ್ ಮಾಡಿದ್ದರು. ಅವರ ಈ ಮಾತಿಗೆ ಪರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಬಾಲಿವುಡ್ ನಟಿ ಸ್ವರ ಭಾಸ್ಕರ್ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ. ಈ ಬೆನ್ನಲ್ಲೇ ಖ್ಯಾತ ನಟ ಪ್ರಕಾಶ್ ರಾಜ್ ಕೂಡ ನಿರ್ದೇಶಕನ ಪರವಾಗಿ ಬ್ಯಾಟ್ ಬೀಸಿದ್ದಾರೆ.
Advertisement
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ವರ ಭಾಸ್ಕರ್, ‘ಸತ್ಯ ಏನು ಅನ್ನುವುದು ಸ್ಪಷ್ಟವಾಗಿ ಜಗತ್ತಿಗೆ ಅರ್ಥವಾಗಿದೆ’ ಎಂದು ಬರೆದುಕೊಂಡಿದ್ದರು. ಸ್ವರ ಭಾಸ್ಕರ್ ಮಾತಿಗೂ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಸ್ವರ ಪರವಾಗಿಯೇ ಮಾತನಾಡಿದ್ದರು. ಪ್ರಕಾಶ್ ರಾಜ್ ಕೂಡ ಕೊನೆಗೂ ಸತ್ಯ ಅಧಿಕೃತವಾಗಿದೆ ಎಂದು ಟ್ವಿಟ್ ಮಾಡಿದ್ದಾರೆ. ಈ ಮೂಲಕ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ. ಇದನ್ನೂ ಓದಿ: ಜಪಾನ್ ನಲ್ಲಿ ಕುತ್ಕೊಂಡು ತನಗೀಗ 40 ವರ್ಷ ಎಂದು ಘೋಷಿಸಿಕೊಂಡ ರಮ್ಯಾ
Advertisement
Advertisement
ಸ್ವರ ಭಾಸ್ಕರ್ ಮತ್ತು ಪ್ರಕಾಶ್ ರಾಜ್ ನಿಲುವನ್ನು ಅನೇಕರು ಪ್ರಶ್ನಿಸಿದ್ದಾರೆ. ನೀವು ಕಾಶ್ಮೀರಿ ಪಂಡಿತರಿಗೆ ಅವಮಾನ ಮಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಇಸ್ರೇಲಿ ನಿರ್ದೇಶಕರ ನಿಲುವನ್ನು ಖಂಡಿಸಬೇಕಿತ್ತು ಎಂದೂ ಸಾಕಷ್ಟು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಪ್ರಕಾಶ್ ರಾಜ್ ಮತ್ತು ಸ್ವರ ಪರವಾಗಿಯೂ ಅನೇಕರು ಧ್ವನಿ ಎತ್ತಿರುವುದರಿಂದ ರಾಷ್ಟ್ರೀಯ ಮಟ್ಟದಲ್ಲೂ ಈ ಸಿನಿಮಾ ಬಗ್ಗೆ ಚರ್ಚೆ ಆಗುತ್ತಿದೆ.
Advertisement
ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್ನ ಖ್ಯಾತ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. `ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.