ದಿ ಕೇರಳ ಸ್ಟೋರಿ (The Kerala Story) ಸಿನಿಮಾದ ನಾಯಕಿ ಅದಾ ಶರ್ಮಾ ಅವರ ಫೋನ್ ನಂಬರ್ (Phone Number) ಅನ್ನು ಕಿಡಿಗೇಡಿಗಳು ಲೀಕ್ ಮಾಡಿದ್ದಾರೆ. ಅದಾ ಬಳಸುತ್ತಿದ್ದ ಪರ್ಸನಲ್ ನಂಬರ್ ಅನ್ನು ಜಾಲತಾಣದಲ್ಲಿ ಕಿಡಿಕೇಡಿಗಳು ಪೋಸ್ಟ್ ಮಾಡಿದ್ದು, ಅದರಿಂದಾಗಿ ಅವರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರಂತೆ. ಅಪರಿಚಿತರು ನಿರಂತರ ಕರೆ ಮತ್ತು ಮಸೇಜ್ ಗಳನ್ನು ಮಾಡುತ್ತಿದ್ದಾರಂತೆ. ಕೆಲವರಂತೂ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ನಟಿ ಹೇಳಿಕೊಂಡಿದ್ದಾರೆ.
ಹಲವು ವಾರಗಳಿಂದ ದೇಶಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೂ ಈ ಹಿಂದೆ ಕೊಲೆ ಬೆದರಿಕೆ (Death Threat) ಹಾಕಲಾಗಿತ್ತು. ಅಲ್ಲದೇ ಅದಾ ಶರ್ಮಾಗೂ (Adah Sharma) ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆಯನ್ನೂ ನೀಡಲಾಗಿತ್ತು. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್ ಖಾನ್
ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಸೋನಿಯಾ (Sonia Balani) ಮುಸ್ಲಿಂ ಹುಡುಗಿಯಾಗಿ, ಹಿಂದೂ ಹುಡುಗಿಯರನ್ನು ಮತಾಂತರ ಮಾಡುವ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತಾರೆ. ನಟಿಯಾಗಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರ ಹಲವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕೊಲೆ ಬೆದರಿಕೆಯ ಸಂದೇಶಗಳು ಸೋನಿಯಾಗೆ ಬಂದಿವೆಯಂತೆ. ಹಾಗಾಗಿ ಆ ನಟಿಗೂ ಭದ್ರತೆಯನ್ನು ಒದಗಿಸಬೇಕು ಎಂದು ಚಿತ್ರತಂಡ ಮನವಿ ಮಾಡಿಕೊಂಡಿತ್ತು.
ನಟಿಯರಿಗೆ ಒಂದು ಕಡೆ ಜೀವ ಬೆದರಿಕೆ ಮಸೇಜ್ ಗಳು ಬರುತ್ತಿದ್ದರೆ, ಮತ್ತೊಂದು ಕಡೆ ಬಾಕ್ಸ್ ಆಫೀಸಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ ಈ ಸಿನಿಮಾ. ವಿವಾದ, ನಿಷೇಧದ ನಡುವೆಯೂ ಸಿನಿಮಾ 200 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ದೋಚಿದೆ. ಕರ್ನಾಟಕವೂ ಸೇರಿದಂತೆ ದೇಶದ ನಾನಾ ಕಡೆ ಸಿನಿಮಾ ತುಂಬಿದ ಪ್ರದರ್ಶನ ಕಾಣುತ್ತಿದೆ.