ಬಾಲಿವುಡ್ ನ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿರುವ ಅವರು, ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.
Advertisement
ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್
Advertisement
Advertisement
ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್, ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.
Advertisement
‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.
ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕೆಲ ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.