ಬಜರಂಗದಳ (Bajrang Dal), ವಿಎಚ್ ಪಿ (VHP) ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಇಂದಿನಿಂದ ರಾಜ್ಯಾದ್ಯಂತ (Karnataka) ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನಕ್ಕೆ ಮುಂದಾಗಿವೆ. ರಾಜ್ಯದ ಹಲವು ಕಡೆ ಸಿನಿಮಾ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಡಿಜಿಪಿ ನೇತೃತ್ವದಲ್ಲಿ ಸಭೆ ನಡೆದಿದೆ. ರಾಜ್ಯದ ಎಲ್ಲ ಪೊಲೀಸ್ (Police) ಅಧಿಕಾರಿಗಳಿಗೂ ಖಡಕ್ ಸೂಚನೆ ನೀಡಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚರಿಕೆ ವಹಿಸುವಂತೆ ತಿಳಿಸಲಾಗಿದೆ.
Advertisement
ದೇಶದ ಹಲವು ಕಡೆ ಮುಸ್ಲಿಂ ಸಂಘಟನೆಗಳು ಚಿತ್ರದ ವಿರುದ್ಧ ಪ್ರತಿಭಟನೆ ಮಾಡಿದ್ದು, ಅದು ರಾಜ್ಯದಲ್ಲಿಯೂ ಮುಂದುವರೆಯಬಹುದು ಎನ್ನುವ ಕಾರಣಕ್ಕಾಗಿ ಪೊಲೀಸರು ಅಲರ್ಟ್ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಎಲ್ಲೆಲ್ಲಿ ಪ್ರದರ್ಶನ ನಡೆಯುತ್ತದೆಯೋ, ಅಲ್ಲಿ ಶಾಂತಿಯನ್ನು ಕಾಪಾಡುವಂತೆ ತಿಳಿಸಲಾಗಿದೆ. ಅಲ್ಲದೇ, ಪ್ರದರ್ಶನಕ್ಕೆ ತೊಂದರೆ ಆಗಬಹುದು ಎಂದು ಹಿಂದೂ ಪರ ಸಂಘಟನೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ಇದನ್ನೂ ಓದಿ:ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ರಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?
Advertisement
Advertisement
ಈ ನಡುವೆಯೇ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರದಲ್ಲಿ ಮುಸ್ಲಿಂ ಹುಡುಗಿಯಾಗಿ ನಟಿಸಿದ್ದ ನಟಿ ಸೋನಿಯಾ ಬಾಲಾನಿಗೆ ಕೊಲೆ ಬೆದರಿಕೆ (Death Threat) ಹಾಕಿದ್ದಾರೆ ಎನ್ನವ ಮಾಹಿತಿ ಸಿಕ್ಕಿದೆ. ಈ ಹಿಂದೆ ಚಿತ್ರದ ನಾಯಕಿ ಅದಾ ಶರ್ಮಾಗೂ (Adah Sharma) ಕೊಲೆ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಪೊಲೀಸ್ ಭದ್ರತೆಯನ್ನೂ ನೀಡಲಾಗಿತ್ತು.
Advertisement
ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಸೋನಿಯಾ (Sonia Balani) ಮುಸ್ಲಿಂ ಹುಡುಗಿಯಾಗಿ, ಹಿಂದೂ ಹುಡುಗಿಯರನ್ನು ಮತಾಂತರ ಮಾಡುವ ಪ್ರಕ್ರಿಯೆಯಲ್ಲಿ ಸಹಾಯ ಮಾಡುತ್ತಾರೆ. ನಟಿಯಾಗಿ ಅವರು ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಪಾತ್ರ ಹಲವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕೊಲೆ ಬೆದರಿಕೆಯ ಸಂದೇಶಗಳು ಸೋನಿಯಾಗೆ ಬಂದಿವೆಯಂತೆ. ಹಾಗಾಗಿ ಆ ನಟಿಗೂ ಭದ್ರತೆಯನ್ನು ಒದಗಿಸಬೇಕು ಎಂದು ಚಿತ್ರತಂಡ ಮನವಿ ಮಾಡಿಕೊಂಡಿದೆ.