ಭಾರತದಲ್ಲಿ ಈಗಾಗಲೇ ನೂರು ಕೋಟಿ ಕ್ಲಬ್ ಸೇರಿರುವ ದಿ ಕೇರಳ ಸ್ಟೋರಿ (The Kerala Story) ಇದೀಗ ವಿದೇಶದಲ್ಲೂ ರಿಲೀಸ್ ಆಗಿದೆ. ಆಸ್ಟ್ರೇಲಿಯಾ (Australia), ಅಮೆರಿಕ (America) ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಿಲೀಸ್ ಆಗಿ ಎರಡನೇ ದಿನಕ್ಕೆ 46 ಲಕ್ಷ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿಯಾಗಿದೆ. ಅಲ್ಲದೇ, ಅಮೆರಿಕಾದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
Advertisement
ಭಾರತದಲ್ಲಿ ನೂರು ಕೋಟಿ
Advertisement
ಭಾರೀ ವಿವಾದ ಹಾಗೂ ನಿಷೇಧದ ನಡುವೆಯೂ ದಿ ಕೇರಳ ಸ್ಟೋರಿ ಇಂದು ನೂರು ಕೋಟಿ ಕ್ಲಬ್ ಸೇರಲಿದೆ. ಸತತ ಎರಡು ವಾರಗಳಿಂದ ಬಾಕ್ಸ್ ಆಫೀಸ್ (Box Office) ದೋಚುತ್ತಿರುವ ಸಿನಿಮಾ ನಿನ್ನೆಗೆ ರೂ.93.37 ಕೋಟಿ ರೂಪಾಯಿ ಸಂಪಾದನೆ ಮಾಡಿದೆ. ದಿನಕ್ಕೆ ಅಂದಾಜು 12 ಕೋಟಿ ರೂಪಾಯಿ ಗಳಿಕೆ ಮಾಡುತ್ತಿರುವುದರಿಂದ ಇಂದು ಸಿನಿಮಾ ನೂರು ಕೋಟಿ ಕ್ಲಬ್ ಸೇರಲಿದೆ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ
Advertisement
Advertisement
ಅದಾ ಶರ್ಮಾ (Adah Sharma) ನಟನೆಯ ‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 8 ದಿನಕ್ಕೆ ಬರೋಬ್ಬರಿ 93.37 ಕೋಟಿ ರೂಪಾಯಿ ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ಈ ಪ್ರಮಾಣದಲ್ಲಿ ದಿ ಕೇರಳ ಸ್ಟೋರಿ ಗೆಲ್ಲುತ್ತಿದ್ದಂತೆಯೇ ಅದಾ ಶರ್ಮಾಗೆ ಭರ್ಜರಿ ಆಫರ್ಸ್ ಬರುತ್ತಿವೆ. ಅಲ್ಲದೇ, ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ.
ಎರಡು ರಾಜ್ಯಗಳಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಇನ್ನೂ ಭಾರಿ ಪ್ರಮಾಣದಲ್ಲಿ ಹಣ ಹರಿದು ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಅಚ್ಚರಿ ಎನ್ನುವಂತೆ ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಶುಕ್ರವಾರ 8.03 ಕೋಟಿ ರೂ. ಶನಿವಾರ 11.22 ಕೋಟಿ ರೂ. ಭಾನುವಾರ 16 ಕೋಟಿ ರೂ. ಸೋಮವಾರ 10.07 ಕೋಟಿ ರೂ. ಮಂಗಳವಾರ 11.14 ಕೋಟಿ ರೂ. ಬುಧವಾರ 12 ಕೋಟಿ ರೂ. ಶುಕ್ರವಾರ ಕೂಡ 12.23 ಕೋಟಿ ರೂಪಾಯಿ ಸೇರಿ ಭಾರತದಲ್ಲೇ ಏಳು ದಿನಕ್ಕೆ 93.37 ಕೋಟಿ ಗಳಿಕೆ ಮಾಡಿದೆ.