ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ಸರ್ಕಾರವು ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ’ಯನ್ನು (The Kerala Story) ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಈ ವಿವಾದಾತ್ಮಕ ಚಿತ್ರದ ಪದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.
ದ್ವೇಷ ಮತ್ತು ಹಿಂಸಾಚಾರದ ಘಟನೆಗಳನ್ನು ತಪ್ಪಿಸಿ ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುವ ಸಲುವಾಗಿ ಪಶ್ಚಿಮ ಬಂಗಾಳ ಸರ್ಕಾರವು ಕೇರಳ ಸ್ಟೋರಿ ಚಲನಚಿತ್ರವನ್ನು ನಿಷೇಧಿಸಲು ನಿರ್ಧರಿಸಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದನ್ನೂ ಓದಿ: The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ
ಕಾಶ್ಮೀರ ಫೈಲ್ಸ್ ಎಂಬುದು ಒಂದು ಪ್ರದೇಶವನ್ನು ಅವಮಾನಿಸುತ್ತದೆ. ಅಂತೆಯೇ ದಿ ಕೇರಳ ಸ್ಟೋರಿ ಚಲನಚಿತ್ರವು ತಿರುಚಿದ ಕಥೆಯಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಚಲನಚಿತ್ರ ನಿರ್ಮಾಪಕ ವಿಪುಲ್ ಶಾ, ಅವರು ಹಾಗೆ ಮಾಡಿದರೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಏನು ಮಾಡಲು ಸಾಧ್ಯವೋ ಅದನ್ನು ಮಾಡಿ ಹೋರಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಯಿಮರಿ ಹಿಡ್ಕೊಂಡು ವರ್ಕೌಟ್ ಮಾಡಿದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಯಾವುದೇ ಥಿಯೇಟರ್‌ನಲ್ಲಿ (Theater) ಚಿತ್ರ ಪ್ರದರ್ಶನ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅದೇ ರೀತಿ ತಮಿಳುನಾಡಿನಲ್ಲಿಯೂ (Tamil Nadu) ಈ ಚಿತ್ರಪದರ್ಶನ ಮಾಡದಂತೆ ತಮಿಳುನಾಡು ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ವಿವಾದದ ನಡುವೆಯೂ 35 ಕೋಟಿ ರೂಪಾಯಿ ಬಾಚಿದ ದಿ ಕೇರಳ ಸ್ಟೋರಿ
ಶುಕ್ರವಾರ ತೆರೆಗೆ ಬಂದ ಈ ಸಿನೆಮಾ ಸಾಕಷ್ಟು ವಾದ-ವಿವಾದಗಳನ್ನು ಹುಟ್ಟಿಹಾಕುತ್ತಿದೆ. ದೇಶದ ಹಲವೆಡೆ ಈ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಈ ಚಿತ್ರದ ಕುರಿತು ಪ್ರತಿಭಟನೆಗಳು ನಡೆಯುತ್ತಿದೆ. ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ತಮಿಳು ನಾಡಿನಲ್ಲಿ ಪ್ರದರ್ಶನವಿಲ್ಲ