ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ (Collection) ಹೆಚ್ಚಿಸಿಕೊಳ್ಳುತ್ತಲೇ ಇದೆ ಅದಾ ಶರ್ಮಾ (Adah Sharma) ನಟನೆಯ ‘ದಿ ಕೇರಳ ಸ್ಟೋರಿ’ (The Kerala Story). ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಅದು ತನ್ನ ಹವಾ ಮುಂದುವರೆಸುತ್ತಿದೆ. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಚಿತ್ರಕ್ಕೆ ಅಡೆತಡೆ ಮಾಡಿದ್ದರೂ, ಇತರ ರಾಜ್ಯಗಳು ದಿ ಕೇರಳ ಸ್ಟೋರಿಗೆ ಕೈ ಹಿಡಿದಿವೆ. ನಿನ್ನೆವರೆಗೂ ಅದು ಗಳಿಸಿದ ಒಟ್ಟು ಹಣ 168 ಕೋಟಿ ರೂಪಾಯಿ ಎಂದು ಸಿನಿ ಪಂಡಿತರು ಲೆಕ್ಕಹಾಕಿದ್ದಾರೆ.
Advertisement
ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್ ಪಡೆದುಕೊಂಡಿದ್ದರೂ, ಮುಂದಿನ ದಿನಗಳಲ್ಲಿ ಅಚ್ಚರಿ ಎನ್ನುವಂತೆ ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಶುಕ್ರವಾರ 8.03 ಕೋಟಿ ರೂ. ಶನಿವಾರ 11.22 ಕೋಟಿ ರೂ. ಭಾನುವಾರ 16 ಕೋಟಿ ರೂ. ಸೋಮವಾರ 10.07 ಕೋಟಿ ರೂ. ಮಂಗಳವಾರ 11.14 ಕೋಟಿ ರೂ. ಬುಧವಾರ 12 ಕೋಟಿ ರೂ. ಶುಕ್ರವಾರ ಕೂಡ 12.35 ಕೋಟಿ ರೂಪಾಯಿ, ಶನಿವಾರ 19.50 ಕೋಟಿ ರೂಪಾಯಿ, ರವಿವಾರ 23.75 ಕೋಟಿ ರೂಪಾಯಿ, ಸೋಮವಾರ 10.30 ಕೋಟಿ ರೂಪಾಯಿ, ಮಂಗಳವಾರ 9.65 ಕೋಟಿ ರೂಪಾಯಿ, ಬುಧವಾರ ಕೂಡ 12 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇದನ್ನೂ ಓದಿ:ಲಂಡನ್ನಲ್ಲಿ ‘ಸಲಾರ್’ ನಟಿ ಶ್ರುತಿ ಹಾಸನ್ ನ್ಯೂ ಫೋಟೋಶೂಟ್
Advertisement
Advertisement
ದಿ ಕೇರಳ ಸ್ಟೋರಿ (The Kerala Story) ಇದೀಗ ವಿದೇಶದಲ್ಲೂ ರಿಲೀಸ್ ಆಗಿದೆ. ಆಸ್ಟ್ರೇಲಿಯಾ (Australia), ಅಮೆರಿಕ (America) ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಿಲೀಸ್ ಆಗಿ ಎರಡನೇ ದಿನಕ್ಕೆ 46 ಲಕ್ಷ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿಯಾಗಿದೆ. ಅಲ್ಲದೇ, ಅಮೆರಿಕಾದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
Advertisement
ಅನೇಕ ಕಡೆ ಅಘೋಷಿತ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಈ ಪ್ರಮಾಣದಲ್ಲಿ ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಇನ್ನೂ ಭಾರಿ ಪ್ರಮಾಣದಲ್ಲಿ ಹಣ ಹರಿದು ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.