ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ

By
1 Min Read

ಕೆಜಿಎಫ್ 2 ಸಿನಿಮಾ ತಂಡ ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಈ ಪೋಸ್ಟರ್ ಸಿನಿಮಾದಲ್ಲಿ ಕೆಲಸ ಮಾಡಿದ ಪ್ರಮುಖ ಮಹಿಳೆಯರನ್ನು ಹೊಂದಿದೆ. ಯಶ್ ನಟನೆಯ ಕೆಜಿಎಫ್ 2 ಚಿತ್ರದಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್, ಹಿರಿಯ ನಟಿ ಮಾಳ್ವಿಕಾ ಅವಿನಾಶ್, ಶ್ರೀನಿಧಿ ಶೆಟ್ಟಿ, ಈಶ್ವರಿ ರಾವ್, ರಚನಾ ಜೋಯಿಸ್ ಮತ್ತು ರೂಪಾ ರಾಯಪ್ಪ ನಟಿಸಿದ್ದಾರೆ. ಇಷ್ಟೂ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೂ ಕಲಾವಿದರ ಫೋಟೋ ಇರುವಂತಹ ಪೋಸ್ಟರ್ ಅನ್ನು ಇಂದು ರಿಲೀಸ್ ಮಾಡಿದೆ ಚಿತ್ರತಂಡ. ಇದನ್ನೂ ಓದಿ : ಆ ಏರಿಯಾದಲ್ಲಿ ಪುನೀತ್ ನಟನೆಯ ಜೇಮ್ಸ್ ರಿಲೀಸ್ ಗೆ 12 ಕೋಟಿ ಕೇಳಿದ್ರಾ ವಿತರಕರು?

ಕೆಜಿಎಫ್ 2 ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಹಲವು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಸದ್ಯದಲ್ಲೇ ಟ್ರೇಲರ್ ಕೂಡ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಅಲ್ಲಿಂದ ತಮ್ಮ ಸಿನಿಮಾದ ಪ್ರಮೋಷನ್ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಇದನ್ನೂ ಓದಿ : ಸೋನಾಕ್ಷಿ ಸಿನ್ಹಾ ಮೋಸ ಮಾಡಿದ್ರಾ? ಅಸಲಿ ಕಥೆ ಏನು?

ಕೆಜಿಎಫ್ ಮೊದಲ ಭಾಗ ಭಾರತೀಯ ಸಿನಿಮಾ ರಂಗದಲ್ಲೇ ಹೊಸ ದಾಖಲೆ ನಿರ್ಮಾಣ ಮಾಡಿತ್ತು. ಕೆಜಿಎಫ್ 2 ಬಗ್ಗೆಯೂ ಅಷ್ಟೇ ನಿರೀಕ್ಷೆಯಿದೆ. ಹಾಗಾಗಿ ಒಂದೊಂದೆ ಪೋಸ್ಟರ್ ರಿಲೀಸ್ ಮಾಡುವ ಪ್ಲ್ಯಾನ್ ಚಿತ್ರತಂಡದ್ದು. ಇದನ್ನೂ ಓದಿ : ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ಐದು ಕಾಂಟ್ರವರ್ಸಿಗಳು

ಕೆಜಿಎಫ್ 2 ಸಿನಿಮಾದಲ್ಲಿ ಹೊಸ ಹೊಸ ಕಲಾವಿದರ ಸಂಗಮವೇ ಇದೆ. ಬಾಲಿವುಡ್ ಖ್ಯಾತ ನಟ ಸಂಜಯ್ ದತ್ತ ಮತ್ತು ದಕ್ಷಿಣದ ಹೆಸರಾಂತ ನಟ ಪ್ರಕಾಶ್ ರೈ ಕೂಡ ಇದರಲ್ಲಿದ್ದಾರೆ. ಈ ಎಲ್ಲ ಕಾರಣದಿಂದಾಗಿ ಬೇರೆ ಬೇರೆ ಭಾಷೆಯ ಚಿತ್ರರಂಗದಲ್ಲೂ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆ.

Share This Article
Exit mobile version