ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್

Public TV
2 Min Read
Karwar Floating Bridge

ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ (Uttara Kannada) ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ (Murudeshwara) ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್‌ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್ ತಯಾರಾಗಿದ್ದು, ಸಮುದ್ರದಲ್ಲಿ ಹೆಜ್ಜೆ ಹಾಕಲು ಇದೀಗ ಅವಕಾಶ ಒದಗಿ ಬಂದಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ಕೇಂದ್ರವಾದ ಮುರುಡೇಶ್ವರಕ್ಕೆ ಪ್ರತಿ ತಿಂಗಳು ಲಕ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಉಡುಪಿಯ ಮಲ್ಪೆ ಬೀಚ್‌ನಲ್ಲಿ 100 ಮೀಟರ್ ಫ್ಲೋಟಿಂಗ್ ಬ್ರಿಡ್ಜ್‌ (Floating Bridge) ಅನ್ನು 80 ಲಕ್ಷ ರೂ. ಖರ್ಚು ಮಾಡಿ ನಿರ್ಮಿಸಲಾಗಿತ್ತು. ಆದರೆ ಸಮುದ್ರದ ಅಲೆಗೆ ಈ ಫ್ಲೋಟಿಂಗ್ ಬ್ರಿಡ್ಜ್ ಕಿತ್ತುಹೋಗಿ ಪ್ರವಾಸಿಗರಿಗೆ (Tourists) ನಿರಾಸೆ ತಂದೊಡ್ಡಿತ್ತು. ಆದರೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಮುರುಡೇಶ್ವರದಲ್ಲಿ 130 ಮೀಟರ್ ಉದ್ದದ ಒಂದು ಕೋಟಿ ವೆಚ್ಚದ ಫ್ಲೋಟಿಂಗ್ ಬ್ರಿಡ್ಜ್ ಅನ್ನು ಓಶಿಯನ್ ಅಡ್ವೆಂಚರ್ಸ್ ಸಂಸ್ಥೆ ನಿರ್ಮಿಸಿ ಇಂದು ಪ್ರವಾಸಿಗರಿಗೆ ಅರ್ಪಣೆ ಮಾಡಿದೆ. ಇದನ್ನೂ ಓದಿ: ಹಲ್ಲೆ ಪ್ರಕರಣ ಮುಚ್ಚಿ ಹಾಕಲು ಪ್ರಿಯಾಂಕ್ ಖರ್ಗೆ ಯತ್ನ – ಸುಳ್ಳು ಕೇಸ್‌ಗಳಿಗೆ ನಾವು ಭಯಪಡಲ್ಲ: ಮಣಿಕಂಠ್ ರಾಠೋಡ್

 ಪ್ರವಾಸಿಗರ ಆಕರ್ಷಣೆಗಾಗಿ ಬೋಟಿಂಗ್, ವಾಟರ್ ಸ್ಕೂಟರ್, ಫ್ಲೋಟಿಂಗ್ ಬ್ರಿಡ್ಜ್, ಪ್ಯಾರಾಚೂಟ್ ಮೊದಲಾದ ಮನೋರಂಜನಾ ಸಾಧನ ಮುರುಡೇಶ್ವರದಲ್ಲಿ ಪ್ರವಾಸಿಗರಿಗಾಗಿ ಲಭ್ಯವಿದೆ. ಪ್ರವಾಸಿಗರು ಇವುಗಳ ಭರಪೂರ ಆನಂದ ಪಡೆಯುತ್ತಿದ್ದಾರೆ. ಸುಮಾರು 130 ಮೀ. ಉದ್ದ, 3.50 ಮೀ. ಅಗಲವಿರುವ ಈ ಸೇತುವೆಯ ಎರಡೂ ಬದಿಯಲ್ಲಿ ಪ್ರವಾಸಿಗರ ರಕ್ಷಣೆಗೆ ರೈಲಿಂಗ್ಸ್ ಅಳವಡಿಸಲಾಗಿದ್ದು, ಸಮುದ್ರಕ್ಕೆ ಬೀಳುವ ಅಪಾಯ ಕಡಿಮೆ. ಪ್ರವಾಸಿಗರ ರಕ್ಷಣೆಗಾಗಿ ಲೈಫ್ ಗಾರ್ಡ್‌ಗಳು ಇರಲಿದ್ದಾರೆ. ಇದನ್ನೂ ಓದಿ: ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

ತೇಲುವ ಸೇತುವೆಯ ಅನುಭವ ಪಡೆಯಲಿಚ್ಛಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜಾಕೆಟ್ ತೊಡಬೇಕಿದೆ. ಉತ್ತಮ ಗುಣಮಟ್ಟದ ವಸ್ತುಗಳನ್ನು ಬಳಸಿದ್ದರಿಂದ ಅಲೆಗಳ ಹೊಡೆತಕ್ಕೆ ತೇಲಿಹೋಗುವ ಭಯವಿಲ್ಲ. ಜೊತೆಗೆ ಮಳೆಗಾಲದಲ್ಲಿ ನಿರ್ಬಂಧಿತ ದಿನ ಹೊರತುಪಡಿಸಿ ಉಳಿದ ದಿನಗಳು ಪ್ರವಾಸಿಗರಿಗೆ ಫ್ಲೋಟಿಂಗ್ ಬ್ರಿಡ್ಜ್‌ನಲ್ಲಿ ಸೀ ವಾಕ್ (Sea Walk) ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

Share This Article