ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ನಡೆದಿದ್ದ ನಕಲಿ ಎನ್‍ಸಿಸಿ ಶಿಬಿರದಲ್ಲಿ (Fake NCC Camp Case) ಶಾಲಾ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಹಲವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
8ನೇ ತರಗತಿಯ ಬಾಲಕಿ ಸೇರಿದಂತೆ 13 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಶಿವರಾಮನ್ ಮೃತ ಆರೋಪಿಯಾಗಿದ್ದಾನೆ. ಆತ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿದ್ದ. ಮುಂಜಾನೆ ಸುಮಾರು 5:15ರ ವೇಳೆಗೆ ಆತ ವಿಷ ಸೇವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಕಲಿ ಎನ್‍ಸಿಸಿ ಶಿಬಿರ ಆಯೋಜಿಸಿ 13 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – 11 ಮಂದಿ ಅರೆಸ್ಟ್
ಆತನನ್ನು ಚಿಕಿತ್ಸೆಗಾಗಿ ಕೂಡಲೇ ಕೃಷ್ಣಗಿರಿಯಿಂದ ಸೇಲಂಗೆ ಸ್ಥಳಾಂತರಿಸಲಾಗಿತ್ತು. ಆದರೆ ಆತ ಸಾವಿಗೀಡಾಗಿದ್ದಾನೆ. ಈ ವಿಚಾರವಾಗಿ ಆರೋಪಿಯ ಕುಟುಂಬದವರಾಗಲಿ ಅಥವಾ ಅವರ ವಕೀಲರಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಕಲಿ ಎನ್‍ಸಿಸಿ ಶಿಬಿರ ಪ್ರಕರಣ ಬೆಳಕಿಗೆ ಬಂದ ನಂತರ 11 ಜನರನ್ನು ಪೋಕ್ಸೊ (POCSO) ಕಾಯ್ದೆಯಡಿ ಬಂಧಿಸಲಾಗಿದೆ. ಘಟನೆ ನಡೆದ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರು, ಪ್ರಾಂಶುಪಾಲರು ಮತ್ತು ವರದಿಗಾರ ಬಂಧಿತರಲ್ಲಿ ಸೇರಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು 60 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಇದೇ ರೀತಿ ಆರೋಪಿಗಳು ಬೇರೆ ಶಾಲೆಗಳಲ್ಲೂ ನಕಲಿ ಶಿಬಿರ ನಡೆಸಿದ್ದಾರಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ವಿವಾದ: ತಮ್ಮಂದಿರಿಂದಲೇ ಅಣ್ಣನ ಕೊಲೆ