ಜೈಪುರ: ಅಖಿಲ ಭಾರತ ಕಾಂಗ್ರೆಸ್ (Congress) ಸಮಿತಿಯ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರ ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜಸ್ಥಾನದ (Rajasthan) ಪ್ರತಾಪಗಢ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯು ಬೆಳಕಿಗೆ ಬಂದಂತೆ ಪೊಲೀಸ್ ಸೈಬರ್ ಕ್ರೈಂ (Police Cyber Crime) ವಿಭಾಗವು ಆರೋಪಿ ಬಿಪಿನ್ ಕುಮಾರ್ ಸಿಂಗ್ ಶಾಂಡಿಲ್ಯನನ್ನು ಪತ್ತೆಹಚ್ಚಿ ಬಂಧಿಸಿ ಆತನನ್ನು ನ್ಯಾಯಾಲಯಕ್ಕೆ (Court) ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅನುಮತಿ
Advertisement
Advertisement
ಈ ಹಿಂದೆಯೇ ಸಾಮಾಜಿಕ ಮಾಧ್ಯಮ ವೇದಿಕೆಯು ಆರೋಪಿಯಲ್ಲಿ ವಿಡಿಯೋವನ್ನು ತೆಗೆದುಹಾಕುವಂತೆ ಸೂಚಿಸಿತ್ತು. ಆದರೆ ಆರೋಪಿ ಸೂಚನೆಯನ್ನು ಧಿಕ್ಕರಿಸಿ ಕೃತ್ಯವನ್ನು ಮುಂದುವರಿಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಪೋಸ್ಟ್ ಮಾಡಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಪ್ರದಾನಕ್ಕೆ ಕ್ಷಣಗಣನೆ : ಭಾರತದ ಯಾವ ಚಿತ್ರಕ್ಕೆ ಸಿಗತ್ತೆ ಆಸ್ಕರ್?