ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತುಮಕೂರು (Tumkur) ಜಿಲ್ಲೆಯ ಶಿರಾದ (Sira) ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: Champions Trophy 2025 | ಟಾಸ್‌ಗೆದ್ದ ಪಾಕ್ ಬ್ಯಾಟಿಂಗ್ ಆಯ್ಕೆ
ಮಗು ಸೇರಿ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಬಸ್ಸಿನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಇವತ್ತೇ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ – ಗೋವಿಂದ ಕಾರಜೋಳ