ಚಿಕ್ಕಬಳ್ಳಾಪುರ: ಫೋಟೋ ಶೂಟ್ ವೇಳೆ ಕಿಡಿಗೇಡಿಗಳು ಯುವಕನೊರ್ವನನ್ನ ಚಾಕು ಹಾಗೂ ಕೀ ಚೈನ್‍ನಿಂದ ಇರಿದು ಕೊಂದ ಘಟನೆ ದೊಡ್ಡಬಳ್ಳಾಪುರದ (Doddaballapura) ರಾಮೇಶ್ವರ ಸಮೀಪದ ಡಾಬಾ ಒಂದರ ಬಳಿ ನಡೆದಿದೆ.
ಕಚೇರಿಪಾಳ್ಯದ ನಿವಾಸಿ ಸೂರ್ಯ (22) ಹತ್ಯೆಗೀಡಾದ ದುರ್ದೈವಿ. ಹತ್ಯೆಗೀಡಾದ ಯುವಕ ಹಾಗೂ ಆತನ ಸ್ನೇಹಿತರು ಹಬ್ಬದ ಸಲುವಾಗಿ ಸಿಂಗರಿಸಿದ್ದ ಡಾಬಾದ ಮುಂದೆ ಫೋಟೋ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಬಂದ ಯುವಕರ ತಂಡ ತಮ್ಮ ಫೊಟೋ ತೆಗೆಯುವಂತೆ ಹೇಳಿದೆ. ಬಳಿಕ ಅವರಿಂದ ಕ್ಯಾಮೆರಾ ಕಿತ್ತುಕೊಂಡು ಗಲಾಟೆ ಮಾಡಿದ್ದಾರೆ. ಈ ವೇಳೆ ಚಾಕು ಹಾಗೂ ಕೀ ಚೈನ್ ಬಳಸಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಗೋಕಾಕ್‍ನಲ್ಲಿ ಯುವಕನ ಬರ್ಬರ ಹತ್ಯೆ
ಕೂಡಲೇ ಕುಸಿದು ಬಿದ್ದ ಯುವಕ ಸೂರ್ಯನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದೆ. ಈ ವೇಳೆ ತೀವ್ರ ರಕ್ತಸ್ರಾವದಿಂದ ಆತ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಗುಟುಕು ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವೈನ್ ಶಾಪ್‌ಗೇ ಬೆಂಕಿ ಇಟ್ಟ ಭೂಪ