ಲಕ್ನೋ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಕಲ್ಲಿನಿಂದ ಹೊಡೆದು ಕೋತಿಯನ್ನು ಕೊಂದಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಯುವಕರನ್ನು ಬಂಧಿಸಲಾಗಿದೆ.
ಅಮೇಥಿ ಜಿಲ್ಲೆಯ ಪಿಪರ್‌ಪುರ ಪೊಲೀಸ್ ವೃತ್ತದ ವ್ಯಾಪ್ತಿಯ ದುರ್ಗಾಪುರ ಮಾರುಕಟ್ಟೆಯ ಬಿಯರ್ ಅಂಗಡಿಯ ಬಳಿ ಈ ಘಟನೆ ನಡೆದಿದ್ದು, ಸಂಗಮ್, ರಾಧೆ ಮತ್ತು ಸೂರಜ್ ಎಂಬ ಮೂವರನ್ನು ಬಂಧಿಸಲಾಗಿದೆ ಎಂದು ಪಿಪರ್‌ಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧೀರೇಂದ್ರ ಸಿಂಗ್ ಯಾದವ್ ಹೇಳಿದ್ದಾರೆ. ಇದನ್ನೂ ಓದಿ: ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್
Advertisement
Advertisement
ಕೋತಿಯನ್ನು ರಕ್ಷಿಸಲು ಯತ್ನಿಸಿದ ದೇವೇಂದ್ರ ಸಿಂಗ್ ಎಂಬಾತನ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 147 (ದೊಂಬಿ ಗಲಾಟೆ ಮಾಡಿದ ಆರೋಪ), ಸೆಕ್ಷನ್ 223 (ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಕ್ಕಾಗಿ) ಹಾಗೂ ಸೆಕ್ಷನ್ 429 (ಪ್ರಾಣಿಯನ್ನು ಕೊಲ್ಲುವ ಅಥವಾ ಅಂಗವಿಕಲಗೊಳಿಸುವ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಾಟೆ – ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
Advertisement
Advertisement
ಮದ್ಯದ ಅಮಲಿನಲ್ಲಿದ್ದ ಯುವಕರು ಬಿಯರ್ ಶಾಪ್‌ನಿಂದ ಹೊರಬಂದಾಗ ಕೋತಿ ಗಾಯಗೊಂಡು ರಸ್ತೆಬದಿಯಲ್ಲಿ ಕುಳಿತಿದ್ದ ವೇಳೆ ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಕಳೆಬರವನ್ನು ಸಾಗಿಸಿದ್ದಾರೆ.