ಬಾಗಲಕೋಟೆ: ಕಾಣೆಯಾಗಿದ್ದ ಲಾಯರ್ (Lawyer) ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ತುಮ್ಮರಮಟ್ಟಿ (Tummaramatti) ಗ್ರಾಮದಲ್ಲಿ ನಡೆದಿದೆ.
ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು. ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಇವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತರು ಇವರ ತಲೆ ಮತ್ತು ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಇದನ್ನೂ ಓದಿ: ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು
ಕೊಲೆ ಮಾಡಿದ್ದು ಯಾರು? ಹತ್ಯೆ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]