ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‍ನಲ್ಲಿ ನಡೆದಿದೆ.
ನಚ್ಚುಬಾಯಿ (3) ಹಾಗೂ ಗೋಲುಬಾಯಿ (2)ಯನ್ನು ಹತ್ಯೆಗೈದು ಬಳಿಕ ತಾಯಿ ಮೀರಾಬಾಯಿ ತಾನೂ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ – ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ರವಾನೆ
ಈ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ನಿಲಮ್ಮನಹಳ್ಳಿ ತಾಂಡದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಕ್ಕಳನ್ನು (Children Murder) ಕೊಲೆ ಮಾಡಿ ಮೀರಾಬಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ:ಸಾರ್ವಜನಿಕವಾಗಿ ನಾಲ್ವರು ಕಳ್ಳರ ಕೈ ಕಟ್ ಮಾಡಿದ ತಾಲಿಬಾನ್ ಸರ್ಕಾರ
ಮೀರಾಬಾಯಿ ಹಲವು ದಿನಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಜೊತೆಗೆ ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳನ್ನು ಹತ್ಯೆ ಮಾಡಿದ್ದಾಳೆ. ಸ್ಥಳಕ್ಕೆ ಧನ್ನೂರಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k