ನಾನಿ (Nani) ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ದಸರಾ ಬಾಕ್ಸಾಫೀಸ್ (Box Office) ಲೂಟಿ ಮಾಡಿದೆ. ಮೊದಲ ದಿನವೆ ದಾಖಲೆ ಮೊತ್ತದ ಗಳಿಕೆ ಕಂಡಿದೆ. ಶ್ರೀರಾಮ ನವಮಿ ಪ್ರಯುಕ್ತ ತೆರೆಗೆ ಬಂದ ದಸರಾ ವಿಶ್ವಾದ್ಯಂತ ಬರೋಬ್ಬರಿ 38 ಕೋಟಿಗೂ ಅಧಿಕ ಹಣ ದೋಚಿದೆ. ಲವರ್ ಬಾಯ್ ಆಗಿ ಪ್ರೇಕ್ಷಕರನ್ನು ರಂಜಿಸುತ್ತಿದ್ದ ನಾನಿ ಮೊದಲ ಬಾರಿ ಔಟ್ ಅಂಡ್ ಔಟ್ ಮಾಸ್ ಲುಕ್ ನಲ್ಲಿ, ರಗಡ್ ಆಗಿ ಕಾಣಿಸಿಕೊಂಡಿದ್ದರು. ನಾನಿ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ನಾನೀಸ್ ದಸರಾ ಸಿನಿಮಾ ವಿದೇಶದಲ್ಲಿಯೂ ಜಾದು ಮಾಡಿದ್ದು, ಅಮೆರಿಕದಲ್ಲಿ ಭರ್ಜರಿ ಓಪನಿಂಗ್ ಕಂಡಿದೆ. ನಾನಿ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಮೈಲೇಜ್ ಸಿಕ್ಕಂತಾಗಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡನೇ ದಿನವೂ ಒಳ್ಳೆಯ ರೀತಿಯಲ್ಲಿ ಬುಕಿಂಗ್ ಆಗುತ್ತಿದೆ. ವೀಕೆಂಡ್ ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ಮೊದಲ ವಾರಾಂತ್ಯಕ್ಕೆ ಏನಿಲ್ಲವೆಂದರೂ 100 ಕೋಟಿ ಕ್ಲಬ್ ಸೇರುವ ನಿರೀಕ್ಷೆ ಇದೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ
ದಸರಾ ಸಿನಿಮಾ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ನಾನಿಗೆ ಜೋಡಿಯಾಗಿ ನಟಿಸಿದ್ದಾರೆ. ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಸೂರಿ ಎಂಬ ಪಾತ್ರದಲ್ಲಿ ಅದ್ಭುತವಾಗಿ ಅಭಿನಯಿಸಿದ್ದಾರೆ. ಸುಧಾಕರ್ ಚೆರಕೂರಿ ನಿರ್ಮಿಸಿರುವ ದಸರಾಗೆ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ. ಶೈನ್ ಟಾಮ್ ಚಾಕೋ, ಸಮುದ್ರಖನಿ, ಸಾಯಿಕುಮಾರ್, ಜಾನ್ಸಿ, ಶಮಾ ಖಾಸೀಂ, ರಾಜಶೇಖರ್ ಅನಿಂಗಿ, ರವಿ ತೇಜ ನನ್ನಿಮಾಲಾ ಮುಂತಾದ ತಾರಾಬಳಗ ಚಿತ್ರದಲ್ಲಿದೆ.