ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ -2’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿರುವ ಈ ಚಿತ್ರದ ಮೊದಲ ಪೋಸ್ಟರ್ ಇದೀಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ ನಾಯಕ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಅವರ ಪಾತ್ರ ಮರಣ ಹೊಂದುತ್ತದೆ. ಎರಡನೇ ಭಾಗದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡ ನಾಯಿ ಸಮಾಜದಲ್ಲಿ ಹೇಗೆ ಜೀವನ ನಡೆಸುತ್ತದೆ ಎಂಬುದನ್ನು ಭಾವನಾತ್ಮಕ ಕಥೆಯೊಂದಿಗೆ ಮನರಂಜನಾತ್ಮಕವಾಗಿ ಹೇಳಲಾಗುತ್ತಿದೆ. ಇದನ್ನೂ ಓದಿ:ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್
ಈಗಾಗಲೇ ಮೈಸೂರು ನಗರದ ಸುತ್ತಮುತ್ತ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು, ಶೇ.50 ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಈ ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ ಸಂಯೋಜನೆ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ಕೆ.ಎಂ. ಪ್ರಕಾಶ್ ಅವರ ಸಂಕಲನ, ತನ್ವಿಕ್ ಜಿ. ಅವರ ಛಾಯಾಗ್ರಹಣ, ರೋಹಿತ್ ರಾಮನ್ ಅವರ ಸಂಭಾಷಣೆ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]