ರಾಜ ಮೌಳಿ (Rajamouli ) ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’ (RRR) ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.
Advertisement
ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ
Advertisement
Advertisement
ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.
Advertisement
ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.