ನವದೆಹಲಿ: ನೂತನ ಸಂಸತ್ ಭವನ (New Parliament) ಹಿರಿಮೆ ಹಾಗೂ ವಿಶ್ವಾಸದ ಸಂಕೇತವಾಗಿದೆ. ಈ ಐತಿಹಾಸಿಕ ಭವನ ಸಶಕ್ತ ಭಾರತದ ಸಂಕೇತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದ್ದಾರೆ.
ನೂತನ ಸಂಸತ್ ಭವನ ಉದ್ಘಾಟನೆಗೊಂಡ ಬಳಿಕ ಟ್ವೀಟ್ (Tweet) ಮಾಡಿದ ಪ್ರಧಾನಿ ಮೋದಿ, ದೇಶವನ್ನು ಹೊಸ ಅಭಿವೃದ್ಧಿ ಉತ್ತುಂಗಕ್ಕೆ ಉತ್ತೇಜಿಸಲಿದೆ. ಜನರ ಅಭಿನಂದನೆಗಳಿಗೆ ನಾನು ಆಭಾರಿಯಾಗಿದ್ದೇನೆ. ಈ ಪ್ರೀತಿಯೇ ನಮ್ಮ ಸಾಧನೆಗಳಿಗೆ ಪ್ರೇರಕ ಶಕ್ತಿ. ಜೊತೆಗೆ ಮತ್ತಷ್ಟು ಸಾಧಿಸಲು ನಮಗೆ ಶಕ್ತಿ ತುಂಬಲಿದೆ ಎಂದರು.
As the new building of India’s Parliament is inaugurated, our hearts and minds are filled with pride, hope and promise. May this iconic building be a cradle of empowerment, igniting dreams and nurturing them into reality. May it propel our great nation to new heights of progress. pic.twitter.com/zzGuRoHrUS
— Narendra Modi (@narendramodi) May 28, 2023
ನಮ್ಮ ಹೃದಯಗಳು ಮತ್ತು ಮನಸ್ಸುಗಳು ಹೆಮ್ಮೆ, ಆತ್ಮವಿಶ್ವಾಸ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲು ಆಗಿರಲಿ, ಕನಸುಗಳನ್ನು ಸೃಷ್ಟಿಸಿ ಮತ್ತು ಅವುಗಳನ್ನು ಈಡೇರಿಸುವಂತಾಗಲಿ. ಇದು ನಮ್ಮ ಮಹಾನ್ ರಾಷ್ಟ್ರವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಏರಿಸಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಉದ್ಘಾಟನೆಗೂ ಮುನ್ನ ಕಾರ್ಮಿಕರನ್ನು ಸನ್ಮಾನಿಸಿದ ಮೋದಿ
ಬೆಳಗ್ಗೆ ನಡೆದ ಪೂಜಾ ವಿಧಿ-ವಿಧಾನಗಳಲ್ಲಿ ಭಾಗವಹಿಸಿದ ಬಳಿಕ ಪ್ರಧಾನಿಯವರು ಬಳಿಕ ಐತಿಹಾಸಿಕ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿ, ದೀಪ ಬೆಳಗಿದರು. ಮಂತ್ರ-ವಾದ್ಯ ಘೋಷ, ಮಂಗಳವಾದ್ಯಗಳಿಂದ ರಾಜದಂಡವನ್ನು ಪ್ರತಿಷ್ಠಾಪಿಸಲಾಯಿತು. ಈ ವೇಳೆ ಪ್ರಧಾನಿಯವರಿಗೆ ಲೋಕಸಬಾ ಸ್ಪೀಕರ್ ಓಂ ಬಿರ್ಲಾ ಸಾಥ್ ನೀಡಿದರು.