ವಿಜಯಪುರ: ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿ (Love) ಮದುವೆಯಾಗಿದ್ದ ನವ ವಿವಾಹಿತ ಜೋಡಿ (Couple) ನೇಣಿಗೆ ಶರಣಾದ (Suicide) ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಮನೋಜ್ ಕುಮಾರ್ ಪೋಳ (30), ರಾಖಿ (23) ನೇಣಿಗೆ ಶರಣಾದ ದಂಪತಿ. ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಕಳೆದ 4 ತಿಂಗಳ ಹಿಂದೆ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಸೋಮವಾರ ತಡರಾತ್ರಿ ಊಟ ಮಾಡಿದ ಬಳಿಕ ನವ ವಿವಾಹಿತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ ಕುಮಾರ್ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಇವತ್ತೂ ಭಾರತಕ್ಕೆ ಬರಲ್ಲ ಪ್ರಜ್ವಲ್ ರೇವಣ್ಣ
ಮನೋಜ್ ಕುಮಾರ್ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದರು. ಇಂದು ಬೆಳಗ್ಗೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರ ತನಿಖೆ ಬಳಿಕ ಪತಿ-ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರ ಕುರಿತ ಮಾಹಿತಿ ತಿಳಿದು ಬರಲಿದೆ. ಇದನ್ನೂ ಓದಿ: ತಿಮಿಂಗಿಲದ ಬಗ್ಗೆ ಹೆಚ್‌ಡಿಕೆ ಮಾಹಿತಿ ಕೊಡಲಿ: ಪರಮೇಶ್ವರ್