ಪ್ರೇಮಿಗಳ ದಿನಕ್ಕೆ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್

Public TV
1 Min Read
FotoJet 1 33

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಅದಿತಿ ಪ್ರಭುದೇವ  ನಾಯಕ – ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರದಿಂದ ಪ್ರೇಮಿಗಳ ದಿನಕ್ಕೆ ಶುಭಕೋರುವ ಪೋಸ್ಟರ್ ಬಿಡುಗಡೆಯಾಗಿದೆ. ‌ಪೋಸ್ಟರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಸಿದ್ದಾರೆ.

aditi prabhudeva 2

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್, ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರ “ಮಾಫಿಯಾ” ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

prajwal devaraj 2

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *