ಯೋಗರಾಜ್ ಭಟ್ಟ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ಅನೇಕ ನಾಯಕಿಯರು ಈ ಹೊತ್ತಿಗೂ ಕಾಯುತ್ತಿದ್ದಾರೆ. ಭಟ್ಟರ ಸಿನಿಮಾದಲ್ಲಿ ನಟಿಸಿದ ಬಹುತೇಕ ಕಲಾವಿದರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ ಇವರ ಸಿನಿಮಾದಲ್ಲಿ ಅವಕಾಶ ಕೇಳಿಕೊಂಡು ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಇಂತಹ ಹೊತ್ತಿನಲ್ಲಿ ಸಿಕ್ಕಿರುವ ಅವಕಾಶವನ್ನು ಮಿಸ್ ಮಾಡಿಕೊಂಡಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್. ಇದನ್ನೂ ಓದಿ :ಗೆಳೆಯನ ಸಿನಿಮಾದಲ್ಲಿ ಕೊತ್ವಾಲ್ ಆದ ವಸಿಷ್ಠ ಸಿಂಹ
ಅಂದುಕೊಂಡಂತೆ ಆಗಿದ್ದರೆ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಬೇಕಿತ್ತು ರಚಿತಾ ರಾಮ್. ಈ ಚಿತ್ರವನ್ನು ನಟ, ಸಚಿವ ಬಿ.ಸಿ.ಪಾಟೀಲ್ ನಿರ್ಮಾಣ ಮಾಡುತ್ತಿರುವುದರಿಂದ, ಅವರ ಮನೆಗೂ ರಚಿತಾ ಹೋಗಿ ಬಂದಿದ್ದರು. ಸಿನಿಮಾದ ಪೂಜೆ, ಮುಹೂರ್ತ ಇತ್ಯಾದಿ ಕಾರ್ಯಕ್ರಮಗಳಲ್ಲೂ ಅವರು ಭಾಗಿಯಾಗಿದ್ದರು. ಇನ್ನೇನು ಭಟ್ಟರು ಶೂಟಿಂಗ್ ಗೆ ಹೊರಡಬೇಕು ಎನ್ನುವಾಗ ರಚಿತಾ ರಾಮ್ ಸಿನಿಮಾದಿಂದ ಹೊರ ನಡೆದಿದ್ದಾರೆ. ಇದನ್ನೂ ಓದಿ : ರಮ್ಯಾಗಾಗಿ ಕಾದ ದಿಲ್ ಕಾ ರಾಜಾ
ರಚಿತಾ ರಾಮ್ ಸಿನಿಮಾದಲ್ಲಿ ಇಲ್ಲ ಎನ್ನುತ್ತಿದ್ದಂತೆಯೇ ಗಾಂಧಿನಗರದಲ್ಲಿ ಸಾಕಷ್ಟು ಗಾಸಿಪ್ ಗಳು ಹರಿದಾಡಿದವು. ಈ ಸಿನಿಮಾದಲ್ಲಿ ಯಶಸ್ ಸೂರ್ಯ ನಾಯಕನಾಗಿ ನಟಿಸುತ್ತಿರುವುದೇ ರಚಿತಾ ಹೊರ ಹೋಗಲು ಕಾರಣ ಎನ್ನಲಾಗಿತು. ಸಂಭಾವನೆಯ ವಿಚಾರವೂ ಕೇಳಿ ಬಂತು. ಅಸಲಿ ವಿಚಾರವೆಂದರೆ, ಸದ್ಯ ರಚಿತಾ ರಾಮ್ ಅವರು ‘ಕ್ರಾಂತಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಜತೆಗೆ ರಿಯಾಲಿಟಿ ಶೋ ಜಡ್ಜ್ ಆಗಿ ಒಪ್ಪಿಕೊಂಡಿದ್ದಾರಂತೆ. ಹಾಗಾಗಿ ಗರಡಿ ಸಿನಿಮಾಗೆ ಡೇಟ್ ಹೊಂದಿಸಲು ಸಾಧ್ಯವಾಗದೇ ಸಿನಿಮಾ ಬಿಡಬೇಕಾಗಿ ಬಂತಂತೆ. ಇದನ್ನೂ ಓದಿ: ಜ್ಯೂ.ಎನ್‍ಟಿಆರ್ ಜೊತೆ ನಟಿಸಲು ಇಷ್ಟ ಎಂದ ಪದ್ಮಾವತಿ
ರಚಿತಾ ರಾಮ್ ಜಾಗಕ್ಕೆ ಬೇರೆ ನಟಿಯು ಬಂದಾಗಿದೆ. ಸಿನಿಮಾದ ಶೂಟಿಂಗ್ ಕೂಡ ಶುರುವಾಗಿದೆ. ಅಂದಹಾಗೆ ರಚಿತಾ ರಾಮ್ ಮಾಡಬೇಕಿದ್ದ ಪಾತ್ರವನ್ನು ಈಗ ಮಾಡುತ್ತಿರುವುದು ಸೋನಲ್ ಮೆಂಥೆರೋ.