ಕಲಬುರಗಿ: ರಾಜ್ಯದ ಜನತೆಯ ವಿಶ್ವಾಸವನ್ನು ಸಂಪೂರ್ಣವಾಗಿ ಗಳಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಫಲವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಹೇಳಿದ್ದಾರೆ.
ಶನಿವಾರ ಕಲಬುರಗಿ ವಿಮಾನ ನಿಲ್ದಾಣ (Kalaburagi Airport) ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಸಂಘಟನೆ ಮಾಡುವುದು ಅವಿರತವಾಗಿರುತ್ತದೆ. ಬಿಜೆಪಿ (BJP) ಕೂಡ ರಾಜ್ಯದಲ್ಲಿ ಸಂಘಟನೆ ಕಾರ್ಯ ಮಾಡಿ, ಜನಪರ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
Advertisement
Advertisement
ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಯಡಿಯೂರಪ್ಪ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರ ಜೊತೆಗೆ ನಮ್ಮ ಅಗ್ರಗಣ್ಯ ನಾಯಕರಾಗಿದ್ದಾರೆ. ಅವರ ಮಾರ್ಗದರ್ಶನದಲ್ಲೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ: ಬಿಎಸ್ವೈ
Advertisement
ವಿರೋಧ ಪಕ್ಷದ ನಾಯಕರು ಇಲ್ಲಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದು, ತಲೆ ಕೆಡಿಸಿಕೊಳ್ಳುವುದಿಲ್ಲ. ಜಮೀರ್ ಅಹ್ಮದ್ ಅವರಿಗೆ 500 ಕೋಟಿ ಆಫರ್ ವಿಚಾರವು ಸಹ ಅದೊಂದು ಗಾಳಿ ಸುದ್ದಿಯಾಗಿದ್ದು, ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k