ಬೆಂಗಳೂರು: ಬಿಜೆಪಿಯೊಳಗಿನ (BJP) ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಹೇಳಿದರು.
ಯಾರೋ ಒಂದಾರು ಜನ ಪ್ರಮುಖರು ನನ್ನ ವಿರುದ್ಧ ಹೇಳಿಕೆ ಕೊಡ್ತಿದ್ದಾರೆ. ರಾಜ್ಯದ ಉಸ್ತುವಾರಿಗಳೂ ಆದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ (Radhamohan Das Agarwal) ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಪೊನ್ನು ರಾಧಾಕೃಷ್ಣ ಅವರು ಮೊನ್ನೆ ಸಭೆಯಲ್ಲಿದ್ದರು. 55- 60 ಜನ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಇದ್ದ ಸಭೆ ಅದಾಗಿತ್ತು. ಶೇ 80-90 ಜನರು ರಾಜ್ಯದ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರರನ್ನು ಮುಂದುವರೆಸಬೇಕೆಂದು ಅಭಿಪ್ರಾಯ ನೀಡಿದ್ದಾಗಿ ಮಾಧ್ಯಮಗಳಲ್ಲೂ ವರದಿ ಬಂದಿದೆ ಎಂದು ವಿಜಯೇಂದ್ರ ಗಮನ ಸೆಳೆದರು.
Advertisement
Advertisement
ಕಾರ್ಯಕರ್ತರು ನನ್ನ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರ ಅಸಮಾಧಾನ ಇರುವುದು ಅಧ್ಯಕ್ಷಗಿರಿ ಬಗ್ಗೆ ಅಲ್ಲ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ, ಅದರಂತೆ ಅಧ್ಯಕ್ಷರ ಆಯ್ಕೆ ಆಗಲಿದೆ. ಇನ್ನೂ ಜಿಲ್ಲಾಧ್ಯಕ್ಷರ ಚುನಾವಣೆಗಳು ಈಗಾಗಲೇ ನಡೆಯುತ್ತಿವೆ. ರಾಜ್ಯದ ಅಧ್ಯಕ್ಷರ ಹುದ್ದೆಗೂ ಚುನಾವಣೆ ನಡೆಯಲಿದೆ. ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಸಮರ್ಪಕ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದರು. ಇದನ್ನೂ ಓದಿ: ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್
Advertisement
Advertisement
ಸ್ಥಳೀಯ ಚುನಾವಣೆಗಳು (Local Election) ಬರುವ ಮುಂಚಿತವಾಗಿ ಪಕ್ಷದ ವರಿಷ್ಠರು ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಗಮನಿಸಬೇಕೆಂಬ ಅಪೇಕ್ಷೆ ನನ್ನದು ಮತ್ತು ಕಾರ್ಯಕರ್ತರದು. ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರ ಯಡಿಯೂರಪ್ಪನವರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯಲ್ಲಿ ಒಂದು ವರ್ಷದಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾರ್ಯಕರ್ತರು ಇದರಿಂದ ನೊಂದಿದ್ದಾರೆ ಎಂದು ತಿಳಿಸಿದರು. ಎಲ್ಲ ವಿಷಯಗಳನ್ನ ಸರಿಪಡಿಸುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್ ಅಲಿಗೆ ಹೇಳಿದ್ದೇನು?
ಶ್ರೀರಾಮುಲು ಅವರ ವಿಚಾರದಲ್ಲಿ ಮೊನ್ನೆ ಕೋರ್ ಕಮಿಟಿಯಲ್ಲಿ ಏನು ಚರ್ಚೆ ಆಗಿದೆಯೋ ಅದರ ಕುರಿತ ಶ್ರೀರಾಮುಲು ಅವರ ಮಾತುಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಶ್ರೀರಾಮುಲು ಅವರು ಹಿರಿಯರಿದ್ದು ಅವರ ಬಗ್ಗೆ ಗೌರವವಿದೆ. ಒಳಗಡೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರ ಉಪಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕೆಂಬ ಚರ್ಚೆ ನಡೆದಿದೆ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ಕೆಲವೊಂದು ಚರ್ಚೆಗಳು ನಡೆದಿವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಸಭೆಯ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡುವುದಿಲ್ಲ. ಶ್ರೀರಾಮುಲು (SriRamulu) ಅವರು ಕೂಡ ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ರು. ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ