ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (Actor Dharmendra) ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ (PM Modi) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ತಮ್ಮೆಡೆಗೆ ಸೆಳೆದುಕೊಂಡಿದ್ದರು. ಜೊತೆಗೆ ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು. ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಅರೆಸೈನಿಕ ಪಡೆ ಪ್ರಧಾನ ಕಚೇರಿ ಆವರಣದಲ್ಲಿ ಸೂಸೈಡ್ ಬಾಂಬ್ ದಾಳಿ – ಮೂವರು ಸಾವು
The passing of Dharmendra Ji marks the end of an era in Indian cinema. He was an iconic film personality, a phenomenal actor who brought charm and depth to every role he played. The manner in which he played diverse roles struck a chord with countless people. Dharmendra Ji was…
— Narendra Modi (@narendramodi) November 24, 2025
ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
