ಬೆಂಗಳೂರು: ಕಾನೂನಿನ ವಿರುದ್ಧ ಯಾವುದೇ ಪಕ್ಷದವರು ನಡೆದುಕೊಂಡರೂ ಅವರ ವಿರುದ್ಧ ಪೊಲೀಸ್ (Police) ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದ್ದಾರೆ.
ಬಿಜೆಪಿ (BJP) ಕಾರ್ಯಕರ್ತರ ಮೇಲೆ ಸುಮ್ಮನೆ ಕೇಸ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಡಿಜಿಪಿಗೆ ಪಕ್ಷದ ನಿಯೋಗ ದೂರು ಕೊಟ್ಟ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಅನಗತ್ಯವಾಗಿ ಯಾರ ಖಾಸಗಿ ಜೀವನದಲ್ಲೂ ಎಂಟ್ರಿ ಆಗೋದಿಲ್ಲ. ಯಾರಾದರೂ ದೂರು ಕೊಟ್ಟರೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಅಲ್ಲದೇ ಎಫ್‍ಐಆರ್ ಹಾಕಿ ತನಿಖೆ ಮಾಡಿ ಅಗತ್ಯ ಬಿದ್ದರೆ ಚಾರ್ಜ್ ಶೀಟ್ ಹಾಕುತ್ತಾರೆ. ಇಲ್ಲವೇ ಪ್ರಕರಣವನ್ನು ಕೈ ಬಿಡುತ್ತಾರೆ. ಅದನ್ನು ಮಾಡಬೇಡಿ ಎಂದರೆ ಪೊಲೀಸ್ ಇಲಾಖೆ ಯಾಕೆ ಇರಬೇಕು? ಎಂದಿದ್ದಾರೆ. ಇದನ್ನೂ ಓದಿ: ವಜ್ರಕವಚ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಉಡುಪಿ ಕೃಷ್ಣ
Advertisement
Advertisement
ಎಲ್ಲೇ ನ್ಯೂನತೆ ಕಂಡು ಬಂದರೆ ನಮ್ಮ ಗಮನಕ್ಕೆ ತರಲಿ. ನಾವು ಅದನ್ನು ಸರಿಪಡಿಸುತ್ತೇವೆ. ಆ ಪಕ್ಷ ಈ ಪಕ್ಷ ಎಂದು ಹೇಳೋದು ಸರಿಯಲ್ಲ. ಯಾವ ಪಕ್ಷದವರು ಎಂದು ಸಹ ನಾವು ನೋಡೋದಿಲ್ಲ. ಕಾನೂನು ವಿರುದ್ಧವಾಗಿ ಕೆಲಸ ಯಾರೇ ಮಾಡಿದರೂ ಅವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
Advertisement
Advertisement
ಸರಿಯಾದ ಕ್ರಮ ಕೈಗೊಳ್ಳದೆ ಇದ್ದರೆ ಸಮಾಜದಲ್ಲಿ ಶಿಸ್ತು ಇರುವುದಿಲ್ಲ. ಅಹಿತಕರ ಘಟನೆಗಳು ನಡೆಯುತ್ತವೆ. ಇದನ್ನೆಲ್ಲ ತಡೆಯಲು ಪೊಲೀಸ್ ಇಲಾಖೆ ಇರುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಅಪಮಾನ ಮಾಡಿಲ್ಲ, ಧರ್ಮದ ಬಗ್ಗೆ ಗೌರವವಿದೆ: ಪರಮೇಶ್ವರ್
Web Stories