ಬೆಂಗಳೂರು: ರಾತ್ರಿ 11 ಗಂಟೆ ನಂತರ ಸುತ್ತಾಡಿದ್ದ ದಂಪತಿಗೆ ಪೊಲೀಸರು (Police) ದಂಡ ಹಾಕಿರುವ ಆರೋಪ ಬೆಂಗಳೂರಿನ (Bengaluru) ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ಕೇಳಿ ಬಂದಿದೆ.
ಘಟನೆಗೆ ಸಂಬಂಧಿಸಿ ಕಾರ್ತಿಕ್ ಎಂಬಾತ ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಸ್ನೇಹಿತರ (Friends) ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ ಮುಗಿಸಿ ದಂಪತಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಹೊಯ್ಸಳ ಗಸ್ತು ವಾಹನದಲ್ಲಿದ್ದವರು ತಡೆದು ಐಡಿ ಕಾರ್ಡ್ ಕೇಳಿದ್ದಾರೆ. ದಂಪತಿ ತಕ್ಷಣ ಮೊಬೈಲ್‍ನಲ್ಲಿದ್ದ ಆಧಾರ್ ಕಾರ್ಡ್ ತೋರಿಸಿದ್ದಾರೆ. ತಕ್ಷಣ ಪೊಲೀಸರು ಮೊಬೈಲ್ ಫೋನ್ ತೆಗೆದುಕೊಂಡು ದಂಪತಿಗೆ ಅವರ ಉದ್ಯೋಗದ ಮಾಹಿತಿ, ಸಂಬಂಧ, ಹೆತ್ತವರ ಬಗ್ಗೆ ಮಾಹಿತಿ ಕೇಳಿದ್ದಾರೆ. ಎಲ್ಲಾ ಮಾಹಿತಿಯನ್ನು ಕೊಟ್ಟ ಮೇಲೆ ಚಲನ್ ಪುಸ್ತಕದಲ್ಲಿ ಎಲ್ಲಾ ಬರೆದುಕೊಂಡು 11 ಗಂಟೆ ಮೇಲೆ ಯಾಕೆ ತಿರುಗಾಡುತ್ತಿದ್ದೀರಾ, ತಿರುಗಾಡುವಂತಿಲ್ಲ ಅಂತಾ ಕ್ಲಾಸ್ ತೆಗೆದುಕೊಂಡಿದ್ದಾರೆ.
Advertisement
I would like to share a traumatic incident my wife and I encountered the night before. It was around 12:30 midnight. My wife and I were walking back home after attending a friend’s cake-cutting ceremony (We live in a society behind Manyata Tech park). (1/15)
— Karthik Patri (@Karthik_Patri) December 9, 2022
Advertisement
ಆಗ ಆ ದಂಪತಿ ಈ ಥರ ರೂಲ್ಸ್ ಬಗ್ಗೆ ನಮ್ಗೆ ಅರಿವಿಲ್ಲ ಅಂತಾ ದಂಪತಿ ಮನವರಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಮೂರು ಸಾವಿರ ದಂಡ ಕಟ್ಟಿ ಅಂತಾ ಕೇಳಿದ್ದಾರೆ. ಅಷ್ಟು ದುಡ್ಡಿಲ್ಲ ಅಂದಾಗ ಕೇಸ್ ಹಾಕ್ತೀವಿ. ಸುಮ್ನೆ ಬಿಡಲ್ಲ ಅಂತಾ ದಂಪತಿಗೆ ಪೊಲೀಸರು ಅವಾಜ್ ಹಾಕಿದ್ದಾರೆ. ಅಷ್ಟರಲ್ಲಿ ಕಾರ್ತಿಕ್ ಪತ್ನಿ ಕಣ್ಣೀರು ಹಾಕಿ ಬಿಟ್ಟುಬಿಡುವಂತೆ ಕೋರಿದ್ದಾರೆ. ಕೊನೆಗೆ 1,000 ರೂಪಾಯಿಯ ದಂಡ ಕಟ್ಟುತ್ತೇನೆ ಅಂತಾ ಕಾರ್ತಿಕ್ ಹೇಳಿ ದಂಡ ಕಟ್ಟಿ ಬಂದಿದ್ದಾರೆ.
Advertisement
ಅದಾದ ಬಳಿಕ ಟ್ವೀಟರ್ ಮೂಲಕ ಈ ಘಟನೆಯನ್ನು ಕಾರ್ತಿಕ್ ಹಂಚಿಕೊಂಡಿದ್ದಾರೆ. ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಅನೇಕರಿಂದ ಕ್ರಮ ಕೈಗೊಳ್ಳುವಂತೆ ಡಿಸಿಪಿಗೆ ಮನವಿ ಮಾಡಿದ್ದರು. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ – ಹವಾಮಾನ ಇಲಾಖೆ
Advertisement
My humble questions to the Bengaluru City Police @BlrCityPolice :
Is this not terrorism, is this not legalized torture?
Is this how honest, low-abiding citizens of this land are meant to be treated?(14/15)
— Karthik Patri (@Karthik_Patri) December 9, 2022
ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ಡಿಸಿಪಿ ಅನೂಪ್ ಎ ಶೆಟ್ಟಿ ಸ್ಪಂದಿಸಿದ್ದಾರೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿ, ಮೇಲ್ನೋಟಕ್ಕೆ ಹೊಯ್ಸಳ ಸಿಬ್ಬಂದಿ ಹಣ ಪಡೆದಿರೋದು ಗೊತ್ತಾಗಿದೆ. ಕ್ಯೂ ಆರ್ ಕೋಡ್ ಮೂಲಕ 1 ಸಾವಿರ ರೂ. ಹಣ ಲಂಚ ಪಡೆದಿದ್ದಾರೆ. ಮೊದಲು ಡಾಕ್ಯುಮೆಂಟ್‍ಗಳನ್ನು ಕೇಳಿದ್ದಾರೆ. ಡಾಕ್ಯುಮೆಂಟ್ ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕ ದಂಡ ಹಾಕುವುದಾಗಿ ಬೆದರಿಸಿದ್ದಾರೆ. ಬಳಿಕ 1 ಸಾವಿರ ದಂಡದ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂದರು.
ಘಟನೆಗೆ ಸಂಬಂಧಿಸಿ ಹೆಚ್.ಸಿ ರಾಜೇಶ್ ಹಾಗೂ ಪಿಸಿ ನಾಗೇಶ್ ಇಬ್ಬರನ್ನು ಅಮಾನತು ಮಾಡಿದ್ದೇವೆ. ತನಿಖೆಯನ್ನು ಕೂಡ ನಡೆಸುತ್ತಿದ್ದೇವೆ. ತನಿಖೆ ಪೂರ್ಣವಾದ ಬಳಿಕ ಸತ್ಯಾಂಶ ಗೊತ್ತಾಗುತ್ತದೆ. ಇಲ್ಲಿವರೆಗೂ ಇದೊಂದೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು