ಬೆಳಗಾವಿ: ಕಳೆದ ವರ್ಷದ ಎಂಇಎಸ್ (MES) ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ ಇಬ್ಬರು ಕನ್ನಡಪರ ಹೋರಾಟಗಾರರ ಮೇಲೆ ನಗರ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದು, ಚುನಾವಣೆ ಹೊಸ್ತಿಲಲ್ಲಿ ರಾಜ್ಯಸರ್ಕಾರದ ಹಾಗೂ ಬೆಳಗಾವಿ (Belagavi) ಪೊಲೀಸರ (Police) ನಡೆಗೆ ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಕನ್ನಡಪರ ಹೋರಾಟಗಾರರಾದ ಸಂಪತ್ ಕುಮಾರ್ ದೇಸಾಯಿ ಹಾಗೂ ಅನಿಲ್ ದಡ್ಡಿಮನಿ ವಿರುದ್ಧ ರೌಡಿಶೀಟ್ ಓಪನ್ ಮಾಡಲಾಗಿದೆ. ಕಳೆದ 2021ರ ಡಿಸೆಂಬರ್‌ನಲ್ಲಿ ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ಗೆ ನುಗ್ಗಿ ಎಂಇಎಸ್ ಮುಖಂಡ ದೀಪಕ್ ದಳವಿಯ ಮೇಲೆ ಈ ಇಬ್ಬರು ಕನ್ನಡಿಗ ಯುವಕರು ಮಸಿ ಬಳಿದಿದ್ದರು. ಇದಲ್ಲದೇ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರು.
Advertisement
Advertisement
ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಾದ ನಂತರ ಜೈಲು ಸೇರಿ ಬಿಡುಗಡೆಯಾಗಿದ್ದರು. ಇದೀಗ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದಕ್ಕೆ ಆ ಇಬ್ಬರು ಯುವಕರ ವಿರುದ್ಧ ರೌಡಿಶೀಟ್ ಓಪನ್ ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿ ಮಾಡಿರುವ ನೋಟಿಸ್ ನೋಡಿ ಕನ್ನಡಪರ ಹೋರಾಟಗಾರರಿಗೆ ಶಾಕ್ ಆಗಿದ್ದು, ನಗರದ ಟಿಳಕವಾಡಿ ಪೊಲೀಸ್ ಠಾಣೆಯಿಂದ ಅನಿಲ್ ದಡ್ಡಿಮನಿಗೆ ಕಾರಣ ಕೇಳಿ ನೋಟಿಸ್ ನೀಡಿದರೇ, ಎಪಿಎಂಸಿ ಠಾಣೆಯಿಂದ ಸಂಪತ್‌ಕುಮಾರ್ ದೇಸಾಯಿಗೆ ಕಾರಣ ಕೇಳಿ ಎಂದು ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ
Advertisement
Advertisement
ಚುನಾವಣೆ ವೇಳೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಮುಚ್ಚಳಿಕೆ ನೀಡುವಂತೆ ನೋಟಿಸ್ ಕೊಡಲಾಗಿದೆ. 50 ಸಾವಿರ ರೂ. ಮೊತ್ತದ ಸ್ವಯಂ ಮುಚ್ಚಳಿಕೆ ಹಾಗೂ ಇಷ್ಟೇ ಮೊತ್ತದ ಇಬ್ಬರು ಜಾಮೀನುದಾರರಿಂದ ಮುಚ್ಚಳಿಕೆ ಪಡೆಯುವಂತೆ ನೋಟಿಸ್ ನೀಡಲಾಗಿದೆ. ಇದು ಕನ್ನಡಪರ ಹೋರಾಟಗಾರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k