ಇಸ್ಲಾಮಾಬಾದ್: ತೋಶಾಖಾನ (ರಾಜ್ಯ ಉಡುಗೊರೆ ಭಂಡಾರ) ಪ್ರಕರಣದಡಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಬಂಧಿಸಲು ಅವರ ಮನೆಗೆ ಪೊಲೀಸರು ಹೋಗಿ ಪೇಚಿಗೆ ಸಿಲುಕಿದ್ದಾರೆ. ಮನೆಯಲ್ಲಿ ಎಷ್ಟು ಹುಡುಕಿದರೂ ಇಮ್ರಾನ್ ಖಾನ್ ಸಿಗದೇ ಇರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಪಾಕ್ ಮಾಜಿ ಪ್ರಧಾನಿ ಬಂಧನದ ಹೈಡ್ರಾಮಾ ಭಾನುವಾರ ನಡೆಯಿತು.
ಇಸ್ಲಾಮಾಬಾದ್ (Islamabad) ಪೊಲೀಸರು ಇಮ್ರಾನ್ ಖಾನ್ ಅವರನ್ನು ಬಂಧಿಸಲು ಅವರ ಮನೆಗೆ ತೆರಳಿದ ಸಂದರ್ಭ ಅನೇಕ ಪ್ರತಿಭಟನಾಕಾರರು ಅವರನ್ನು ತಡೆದರು. ಇಮ್ರಾನ್ ಖಾನ್ ಅವರನ್ನು ಬಂಧಿಸಿದರೆ ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಇಮ್ರಾನ್ ಖಾನ್ ಅವರು ಗಾಯಗೊಂಡ ಕಾರಣ ತೋಶಾಖಾನ (Toshakhana) ವಿಚಾರಣೆಗೆ ಹಾಜರಾಗಿರಲಿಲ್ಲ. ವಿಚಾರಣೆಗೆ ಗೈರಾದ ಕಾರಣ ಸೆಷನ್ಸ್ ನ್ಯಾಯಾಲದ ನ್ಯಾಯಾಧೀಶರು ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದರು. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿ ಗಂಗವ್ವಗೆ ಮನೆ ಕಟ್ಟಲು ಸಹಾಯ ಮಾಡಿದ ನಟ ನಾಗಾರ್ಜುನ
ಇಮ್ರಾನ್ ಖಾನ್ ಅವರನ್ನು ಬಂಧಿಸುವ ಸಲುವಾಗಿ ಎಸ್‌ಪಿ (SP) ಅವರ ಕೊಠಡಿಗೆ ತೆರಳಿದಾಗ ಅವರು ಅಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಇಮ್ರಾನ್ ಖಾನ್, ತೋಶಾಖಾನ ಪ್ರಕರಣದಲ್ಲಿ ಸಾರ್ವಜನಿಕ ವಿಚಾರಣೆಗಾಗಿ ತಮ್ಮ ಕಾರ್ಯಕರ್ತರ ತಂಡವು ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆಯಲಿದೆ. ನನ್ನ ವಿರುದ್ಧ ಇರುವ ಕೇಸ್‌ಗಳೆಲ್ಲವೂ ಸುಳ್ಳು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂಸೆಗೆ ಪ್ರಚೋದನೆ – ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು
ಏನಿದು ತೋಶಾಖಾನ ಪ್ರಕರಣ?
ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರವಧಿಯಲ್ಲಿ ದುಬಾರಿ ಮೌಲ್ಯದ ನೆಕ್ಲೆಸ್ ಉಡುಗೊರೆಯಾಗಿ ಬಂದಿತ್ತು. ಆದರೆ ಅವರು ಅದನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡದೇ ವ್ಯಾಪಾರಿಯೊಬ್ಬರಿಗೆ 18 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ತನಿಖೆ ನಡೆಸುತ್ತಿದೆ. ಖಾನ್ ಉಡುಗೊರೆಯಾಗಿ ಪಡೆದ ನೆಕ್ಲೆಸ್ ಅನ್ನು ತೋಶಾಖಾನಾಕ್ಕೆ (ರಾಜ್ಯ ಉಡುಗೊರೆ ಭಂಡಾರ) ಕಳುಹಿಸಿಲ್ಲ. ಆದರೆ ಮಾಜಿ ವಿಶೇಷ ಸಹಾಯಕ ಜುಲ್ಫಿಕರ್ ಬುಖಾರಿಗೆ ನೀಡಿದ್ದರು. ಜುಲ್ಪಿಕರ್ ಅದನ್ನು ಲಾಹೋರ್‌ನ (Lahore) ಆಭರಣ ವ್ಯಾಪಾರಿಗೆ 18 ಕೋಟಿ ರೂ.ಗೆ ಮಾರಾಟ ಮಾಡಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ತಮಿಳಿನ ಈ ಹೀರೋಗೆ 100 ಕೋಟಿ ವೆಚ್ಚದಲ್ಲಿ ಚಿತ್ರ ನಿರ್ಮಾಣ ಮಾಡ್ತಾರೆ ಕಮಲ್ ಹಾಸನ್