DistrictsKarnatakaKolarLatestMain Post

ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

ಕೋಲಾರ: ಬಿಜೆಪಿ ಪಕ್ಷದ ಕಾರ್ಯಕರ್ತನ ಕೊಲೆಯಿಂದ ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಡಾ. ವೇಣುಗೋಪಾಲ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ 2 ವರ್ಷ, ಬಸವರಾಜ ಬೊಮ್ಮಾಯಿ ನೇತೃತ್ವದ 1 ವರ್ಷದ ಸಾಧನೆಯನ್ನು ಕಾರ್ಯಕರ್ತರಿಗೆ ತಿಳಿಸುವುದು ಈ ಜನೋತ್ಸವದ ಉದ್ದೇಶವಾಗಿದೆ. ರಾಜ್ಯದಲ್ಲಿ ಹಲವಾರು ಸಂಕಷ್ಟದ ಸವಾಲುಗಳ ಮಧ್ಯೆಯೂ ಉತ್ತಮ ಆಡಳಿತ ನೀಡಿದ್ದಾರೆ. ಅದಕ್ಕಾಗಿ ಕಾರ್ಯಕರ್ತರಿಗೆ ಸರ್ಕಾರಗಳ ಯೋಜನೆಗಳ ಕುರಿತು ತಿಳಿಸಲು ಜನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಕೊರೊನಾವನ್ನು ಎದುರಿಸಲಾಯಿತು. ಅದರಂತೆ ವಿಶೇಷ ಪ್ಯಾಕೇಜ್ ಘೋಷಣೆ, ಆರೋಗ್ಯ ವ್ಯವಸ್ಥೆಯನ್ನು ಪ್ರಬಲವಾಗಿ ಮಾಡಿದ್ದು, ಸಾಮಾನ್ಯ ಜನತೆಗೆ ಮೂಲಸೌಕರ್ಯಗಳನ್ನು ಒದಗಿಸಲಾಯಿತು. ರೈತರು ಸೇರಿದಂತೆ ಕಾರ್ಮಿಕರು ಮಹಿಳೆಯರಿಗೆ ಸೌಲಭ್ಯಗಳನ್ನು ಒದಗಿಸಲಾದೆ. ಅತ್ಯುತ್ತಮ ಆರೋಗ್ಯ ಸೇವೆಯಿಂದ ಇಲಾಖೆ ಪ್ರಶಂಸೆಗೆ ಒಳಪಟ್ಟಿತ್ತು. ಕೋವಿಡ್ ಸಂದರ್ಭದಲ್ಲಿ 10 ಲಕ್ಷ ಲಸಿಕಾ ಕಾರ್ಯವನ್ನೂ ಯಶಸ್ವಿಯಾಗಿ ನೀಡಲಾಗಿದೆ. ಬಿಪಿಎಲ್ ಕಾರ್ಡುದಾರರಿಗೆ 2 ವರ್ಷಗಳ ಕಾಲ ಅಕ್ಕಿ, ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮ ಕೇಸ್‍ಗೆ ಟ್ವಿಸ್ಟ್ – ಲಂಚ ಪಡೆದ ಬಿಜೆಪಿ ಶಾಸಕರ ಆಡಿಯೋ ವೈರಲ್

ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು 4 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸುಮಾರು ಎರಡೂವರೆ ಲಕ್ಷ ಮಂದಿ ಸೇರಿದಂತೆ ಜಿಲ್ಲೆಯಾದ್ಯಂತ 60 ಸಾವಿರ ಮಂದಿಗೆ 1,200ಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Live Tv

Leave a Reply

Your email address will not be published.

Back to top button