ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ವಿಧಾನ ಸರಳ – ಆರ್.ಅಶೋಕ್

Public TV
1 Min Read
R Ashoka

ಬೆಳಗಾವಿ: ಕೃಷಿ ಭೂಮಿಯನ್ನು (Agricultural Land) ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನವನ್ನು ಸರ್ಕಾರ ಇನ್ನಷ್ಟು ಸರಳೀಕರಣಗೊಳಿಸಿದೆ. ಈ ಸಂಬಂಧ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashoka) ತಿಳಿಸಿದರು.

BASAVARAJ HORATTI 1

ವಿಧಾನ ಪರಿಷತ್ (Legislative Council) ನಲ್ಲಿಂದು ಮಾತನಾಡಿದ ಅವರು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಯು ನಿಯಮಗಳಿಗೆ ಒಳಪಟ್ಟು ಅನುಮತಿಯನ್ನು ನಿರಾಕರಿಸಬಹುದು ಅಥವಾ ತಾನು ಯುಕ್ತವೆಂದು ಆಲೋಚಿಸುವಂತಹ ಷರತ್ತುಗಳಿಗೆ ಒಳಪಟ್ಟು ಕೊಡಬಹುದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮದ್ಯಕ್ಕೆ ದಾಸರಾದ ದಂಪತಿ – ಮಗು ಸಾಕಲಾಗದೇ ಬಾಲಮಂದಿರದಲ್ಲಿ ಬಿಟ್ಟುಹೋದ್ರು

Agriculture

ಅರ್ಜಿದಾರರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ (Karnataka Land Revenue Act), 1964ರ ಕಲಂ 96(4)ರನ್ವಯ ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕೆ ಹೊಂದಿರುವ ಯಾವುದೇ ಭೂಮಿಯನ್ನು ಯಾವುದೇ ಇತರೆ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಯ ಅನುಮತಿಯಿಲ್ಲದೇ ಕಟ್ಟಡಗಳನ್ನು ಕಟ್ಟುವುದು ಅಥವಾ ಉಪಯೋಗ ಮಾಡಿದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 96(4)ರನ್ವಯ ದಂಡ ವಿಧಿಸಿ, ಭೂ ಪರಿವರ್ತನೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಚಾರ್ಲ್ಸ್ ಶೋಭರಾಜ್ ಬಿಡುಗಡೆಗೆ ನೇಪಾಳ ಸುಪ್ರೀಂ ಆದೇಶ

Agriculture 2

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ಕ್ಕೆ ಇತ್ತೀಚೆಗೆ ಯಾವುದೇ ತಿದ್ದುಪಡಿ ತಂದಿರುವುದಿಲ್ಲ ಎಂದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *