ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಕಾಂಬಿನೇಷನ್ ನ ‘ಮ್ಯಾಟ್ನಿ’ (Matney) ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದೆ. ಇನ್ನೇನು ಬಿಡುಗಡೆಗೂ ಈ ಸಿನಿಮಾವನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಸಮಯದಲ್ಲಿ ನಿರ್ಮಾಪಕರು ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದು, ಈ ಚಿತ್ರವನ್ನು ಕಾಶಿ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ.
Advertisement
ಈ ಸಿನಿಮಾಗೆ ‘ಎಲ್ಲಾ ನಿನಗಾಗಿ’ (Ella Ninagagi) ಎಂದು ಟೈಟಲ್ ಇಡಲಾಗಿದ್ದು, ಇದನ್ನು ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿದ್ದಾರೆ. F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಆರ್ಕಾಟ್ (Arcot) ಚಿತ್ರದ ನಾಯಕನಾದರೆ, ಧನ್ಯ ರಾಮಕುಮಾರ್ (Dhanya Ram Kumar) ನಾಯಕಿ. ಇದನ್ನೂ ಓದಿ:ವಿಧಾನಸಭೆ ಚುನಾವಣೆ 2023: ಸುದೀಪ್ ರೋಡ್ ಶೋ ಮತ್ತೆ ರದ್ದು
Advertisement
Advertisement
ಇತ್ತೀಚೆಗೆ ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ದೇವಸ್ಥಾನದಲ್ಲಿ ನೆರವೇರಿದ್ದು, ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.