CinemaKarnatakaLatestMain PostSandalwood

ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿರ್ಮಾಪಕ ಆಸ್ಪತ್ರೆಗೆ ದಾಖಲು

Advertisements

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಬಿಪಿ ಹೆಚ್ಚಾದ ಕಾರಣದಿಂದಾಗಿ ಅವರು ಪ್ರಜ್ಞೆ ತಪ್ಪಿದ್ದರಂತೆ. ಕೂಡಲೇ ಬೆಂಗಳೂರಿನ ಶೇಷಾದ್ರಿ ಪುರಂ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪಿಬಿ ಹೆಚ್ಚಾದ ಜೊತೆಗೆ ಅವರಿಗೆ ಸ್ಟ್ರೋಕ್ ಕೂಡ ಆಗಿದೆ ಎಂದು ಹೇಳಲಾಗುತ್ತಿದ್ದು, ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರಂತೆ. ನಿನ್ನೆ ರಾತ್ರಿಯೇ ಅವರಿಗೆ ಪಿಬಿ ಹೆಚ್ಚಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಾಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಆಪ್ತರು ತಿಳಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವುದರಿಂದ ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಥೇಟ್ ನಯನತಾರಾ ರೀತಿಯೇ ಕಂಗೊಳಿಸಿದ ‘ಸತ್ಯ’ ಧಾರಾವಾಹಿಯ ಗೌತಮಿ

ಪುನೀತ್ ರಾಜ್ ಕುಮಾರ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವ ಕಿಶೋರ್ ಪತ್ತಿಕೊಂಡ, ಮೊದಲ ಸಿನಿಮಾದಲ್ಲೇ ಗೆಲುವು ಕಂಡವರು. ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದರು. ಒಳ್ಳೆಯ ನಿರ್ಮಾಪಕ ಎಂದೂ ಗುರುತಿಸಿಕೊಂಡಿದ್ದ ಕಿಶೋರ್, ಆದಷ್ಟು ಬೇಗ ಗುಣಮುಖರಾಗಲಿ ಎಂದು ಪುನೀತ್ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

Live Tv

Leave a Reply

Your email address will not be published.

Back to top button