ದಿ ಕೇರಳ ಸ್ಟೋರಿ (The Kerala Story) ಚಿತ್ರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee). ಈ ಕುರಿತು ಚಿತ್ರತಂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ದಿದಿಯ ಈ ನಡೆಗೆ ಬೆಂಬಲಿಸುವಂತೆ ಇನ್ನೂ ಹಲವು ರಾಜ್ಯಗಳು ಚಿತ್ರದ ನಿಷೇಧಕ್ಕೆ ಮುಂದಾಗಿದ್ದವು. ಈ ಕುರಿತು ಚಿತ್ರದ ನಿರ್ಮಾಪಕ ವಿಫುಲ್ ಅಮೃತ್ ಲಾಲ್ ಶಾ (Vipul Amrutlal Shah) ಪ್ರತಿಕ್ರಿಯಿಸಿ, ಮಮತಾ ದಿದಿಗೆ ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ.
Advertisement
‘ಸಿನಿಮಾವನ್ನು ನಿಷೇಧ ಮಾಡುವುದು ಸರಿಯಾದ ಕ್ರಮವಲ್ಲ. ಮಮತಾ ದಿದಿಗೆ ಕೈ ಮುಗಿದು ಕೇಳುತ್ತೇನೆ. ಮೊದಲು ಸಿನಿಮಾ ವೀಕ್ಷಿಸಲಿ. ಅದರಲ್ಲಿನ ಸರಿ ತಪ್ಪುಗಳ ಬಗ್ಗೆ ಚರ್ಚೆ ಮಾಡಲಿ. ಅವುಗಳನ್ನು ಒಪ್ಪುವುದು ಬಿಡುವುದು ನಂತರದ ಮಾತು. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ಸಹಜ. ಮೊದಲು ಅವರು ಸಿನಿಮಾ ನೋಡಲಿ ಎಂದು ವಿನಂತಿಸುವೆ’ ಎಂದಿದ್ದಾರೆ. ನಿರ್ಮಾಪಕರು. ಇದನ್ನೂ ಓದಿ:‘ಆದಿಪುರುಷ್’ ಪೋಸ್ಟರ್‌ನಲ್ಲಿ ಮತ್ತೆ ಎಡವಟ್ಟು- ಚಿತ್ರತಂಡ ವಿರುದ್ಧ ಫ್ಯಾನ್ಸ್ ಗರಂ
Advertisement
Advertisement
ಏನೇ ನಿಷೇಧ ಏರಲಿ, ಸಿನಿಮಾವಂತೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದೆ. ಈ ವಾರದಲ್ಲೇ ಸಿನಿಮಾ ಇನ್ನೂರು ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಚಿತ್ರ ಪ್ರದರ್ಶನಕ್ಕೆ ಯಾರೂ ಅಡ್ಡಿ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರಿಂದ ಇನ್ನೂ ಹಲವಾರು ಕಡೆ ಸಿನಿಮಾ ಉತ್ತಮ ಪ್ರದರ್ಶನ ಕಾಣಬಹುದು. ಇನ್ನಷ್ಟು ದುಡ್ಡು ಬಾಕ್ಸ್ ಆಫೀಸಿಗೆ ಹರಿದು ಬರಬಹುದು.
Advertisement
ಈ ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳಲ್ಲಿ ಬಿಡುಗಡೆಯಾಗಿದೆ. ಅಲ್ಲಿಯೂ ಪ್ರೇಕ್ಷಕರು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಮತ್ತಷ್ಟು ದೇಶಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ಸಿದ್ಧತೆ ಮಾಡಿಕೊಂಡಿದೆ.