ಬಳ್ಳಾರಿ: ಮುಡಾ ವಿಚಾರದಲ್ಲಿ (MUDA Case) ಸಿಎಂ ಸಿದ್ದರಾಮಯ್ಯ (Siddaramaiah) ಯಾವುದೇ ತಪ್ಪು ಮಾಡಿಲ್ಲ. ಅವರ ರಾಜೀನಾಮೆ ಪ್ರಮೇಯವೇ ಇಲ್ಲ ಎಂದು ಸಚಿವ ಮಂಕಾಳ ವೈದ್ಯ (Mankala Vaidya) ಹೇಳಿದ್ದಾರೆ.
ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ನೆಪವೊಡ್ಡಿ ಬಿಜೆಪಿಗರು ಸುಖಾ ಸುಮ್ಮನೇ ಆರೋಪ ಮಾಡಿ ಪಾದಯಾತ್ರೆ ಮಾಡಿದ್ದಾರೆ. ಈ ವಿಷಯದಲ್ಲಿ ರಾಜ್ಯಪಾಲರ ನಡೆ ಖಂಡನೀಯ. ಅವರು ಕೇಂದ್ರದ ಬಿಜೆಪಿಯ ಏಜೆಂಟ್‍ನಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಸ್ಸಾಂ ಲೈಂಗಿಕ ದೌರ್ಜನ್ಯ ಆರೋಪಿ ಪೊಲೀಸರಿಂದ ಎಸ್ಕೇಪ್ ವೇಳೆ ಕೆರೆಗೆ ಬಿದ್ದು ಸಾವು
ಮುಖ್ಯಮಂತ್ರಿಯವರ ಬದಲಾವಣೆಯ ಸುಳಿವು ಸಿಕ್ಕಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆಗೆ, ಬಿಜೆಪಿಯವರು ಸುಮ್ಮನೆ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವಲ್ಲಿ ನಿಸ್ಸೀಮರು. 136 ಶಾಸಕರ ಬೆಂಬಲದಿಂದ ಸರ್ಕಾರ ರಚನೆಯಾಗಿದೆ. ಸ್ಪಷ್ಟ ಬಹುಮತ ಇದೆ ಎಂದು ಟಾಂಗ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪೋಲೆಂಡ್, ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್