ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiha) ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಿಂದ(Delhi) ಒತ್ತಡ ಬಂದಿರುವ ಕಾರಣ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರಬಹುದು ಎಂದು ಹೇಳಿದರು. ಇದನ್ನೂ ಓದಿ: ಸಿಎಂಗೆ ಮುಡಾ ಸಂಕಷ್ಟ – ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಈಗ ತಾನೇ ಸುದ್ದಿ ಬಂದಿದೆ. ಯಾವ ರೀತಿ ಅನುಮತಿ ಕೊಟ್ಟಿದ್ದಾರೆ ನೋಡಬೇಕು. ಈ ಪ್ರಕರಣ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ವಿ, ಪ್ರಾಸಿಕ್ಯೂಷನ್‌ಗೆ ಕೊಡಲ್ಲ ಅನ್ನುವ ವಿಶ್ವಾಸ ಇತ್ತು. ಆದರೆ ಅನುಮತಿ ಕೊಟ್ಟಿದ್ದಾರೆ. ನಾವು ಕಾನೂನಾತ್ಮಕವಾಗಿ ಎದುರಿಸ್ತೇವೆ. ರಾಜಭವನ ದುರುಪಯೋಗ ಆಗ್ತಿದೆ. ದೆಹಲಿಯಿಂದ ಒತ್ತಡ ಬಂದು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರಬಹುದು. ಇದನ್ನು ನಾವು ದ್ವೇಷದ ನಡೆ ಅಂತನೇ ಭಾವಿಸಬೇಕಾಗುತ್ತದೆ ಎಂದು ಪ್ಯಾಸಿಕ್ಯೂಷನ್ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಸಿಡಿಲು ಬಡಿದು 106 ಕುರಿಗಳು ದಾರುಣ ಸಾವು; ಕಂಗಾಲಾದ ಕುರಿಗಾಹಿಗಳು
ನಮ್ಮ ಕಾನೂನು ತಂಡ ಏನು ತೀರ್ಮಾನ ಮಾಡುತ್ತದೆ ನೋಡಬೇಕು. ಸಿಎಂ ರಾಜೀನಾಮೆ ಪ್ರಶ್ನೆ ಈಗ ಉದ್ಭವ ಆಗಲ್ಲ. ನಾವು ಸಿದ್ದರಾಮಯ್ಯ ಪರ ನಿಂತುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಂಬೈ ಟೆರರ್ ಅಟ್ಯಾಕ್ – ಪಾಕ್ ಮೂಲದ ರಾಣಾ ಹಸ್ತಾಂತರಕ್ಕೆ ಯುಎಸ್ ಕೋರ್ಟ್ ಅಸ್ತು
ಮಾಜಿ ಸಿಎಂ ಯಡಿಯೂರಪ್ಪ (Yadiyurappa) ವಿರುದ್ಧದ ಪೋಕ್ಸೋ ಕೇಸ್ ಬಗ್ಗೆ ಮಾತನಾಡಿ, ಘಟನೆ ಆಗಿರುವುದು ಸತ್ಯ. ಕೇಸ್ ಮುಂದುವರೆಸುತ್ತೇವೆ. ತಡೆಯಾಜ್ಞೆ ತೆರವು ಮಾಡಿಸಿ ಮುಂದಿನ ಕಾನೂನು ಪ್ರಕ್ರಿಯೆಗೆ ಮುಂದಾಗುತ್ತೇವೆ. ಈಗಾಗಲೇ ಪೋಕ್ಸೋ ಕೇಸ್‌ನಲ್ಲಿ ತಡೆಯಾಜ್ಞೆ ತೆರವಿಗೆ ಎಜಿಗೆ ಸೂಚಿಸಲಾಗಿದೆ ಎಂದು ಪೋಕ್ಸೋ ಕೇಸ್ ಕುರಿತು ಕಾನೂನು ಪ್ರಕ್ರಿಯೆ ತೀವ್ರಗೊಳಿಸುವ ಬಗ್ಗೆ ಸಚಿವರು ಸುಳಿವು ನೀಡಿದರು. ಇದನ್ನೂ ಓದಿ: ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು