ಬೊಕ್ಕೆ ಹಿಡಿದು ಲವರ್ ಬಾಯ್ ಗೆಟಪ್‌ನಲ್ಲಿ ಬಂದ ಪ್ರಭಾಸ್

Public TV
1 Min Read
prabhas 1 4

ಡಾರ್ಲಿಂಗ್ ಪ್ರಭಾಸ್ (Actor Prabhas) ಇದೀಗ ಬೊಕ್ಕೆ ಹಿಡಿದು ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ರೊಮ್ಯಾಂಟಿಕ್‌ ಹುಡುಗನ ಅವತಾರದಲ್ಲಿ ಪ್ರಭಾಸ್‌ ಮಿಂಚಿದ್ದಾರೆ. ‘ದಿ ರಾಜಾ ಸಾಬ್’ ಸಿನಿಮಾದ ಪ್ರಭಾಸ್ ಪಾತ್ರದ ಗ್ಲಿಂಪ್ಸ್ ಇದೀಗ ರಿವೀಲ್ ಆಗಿದೆ. ಇದನ್ನೂ ಓದಿ:ಕಾರ್ತಿ ನಟನೆಯ ‘ಸರ್ದಾರ್ 2’ ಸಿನಿಮಾ ರಿಜೆಕ್ಟ್ ಮಾಡಿದ ಶ್ರೀಲೀಲಾ

prabhas 1

ಪ್ಯಾನ್ ಇಂಡಿಯಾ ಚಿತ್ರ ‘ಕಲ್ಕಿ’ (Kalki 2898 AD) ಯಶಸ್ಸಿನ ನಂತರ ‘ದಿ ರಾಜಾ ಸಾಬ್’ (The Raja Saab) ಚಿತ್ರದ ಮೂಲಕ ಪ್ರಭಾಸ್ ಸದ್ದು ಮಾಡುತ್ತಿದ್ದಾರೆ. ಮತ್ತೆ ಲವರ್ ಬಾಯ್ ಗೆಟಪ್‌ನಲ್ಲಿ ನಟ ಮಿಂಚಿದ್ದಾರೆ. ಬೈಕ್ ರೈಡ್ ಮಾಡುತ್ತಾ ಬೊಕ್ಕೆ ಹಿಡಿದು ನಟ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಸಖತ್ ಸ್ಟೈಲೀಶ್ ಆಗಿರುವ ಪ್ರಭಾಸ್ ಪಾತ್ರದ ಮೊದಲ ಲುಕ್‌ಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

prabhas 1 3ಈ ಚಿತ್ರವನ್ನು ಮಾರುತಿ ಎಂಬುವವರು ನಿರ್ದೇಶನ ಮಾಡಿದ್ದು, ಪ್ರಭಾಸ್‌ಗೆ ನಿಧಿ ಅಗರ್‌ವಾಲ್ ಜೋಡಿಯಾಗಿ ನಟಿಸಿದ್ದಾರೆ. ಮತ್ತೋರ್ವ ನಟಿಯಾಗಿ ಪಾಕಿಸ್ತಾನಿ ಬೆಡಗಿ ಸಜಲ್ ಅಲಿ ಕೂಡ ಇರಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

ಇನ್ನೂ ಸಿನಿಮಾದಲ್ಲಿನ ಪ್ರಭಾಸ್ ಪಾತ್ರದ ಗ್ಲಿಂಪ್ಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಮುಂದಿನ ವರ್ಷ ಏ.10ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿರೋ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ.

Share This Article