ಬೆಳಗಾವಿ: ಪಾರ್ಕಿಂಗ್ ಮತ್ತು ದೇವಸ್ಥಾನದ ಜಾಗ ವಿಚಾರಕ್ಕೆ ಸಂಬಂಧಿಸಿದಂತೆ ಗೌಂಡವಾಡದಲ್ಲಿ ನಡೆದ ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ. ಈ ಮುಂಚೆ ಕೂಡ ಸತೀಶ್ ಪಾಟೀಲ್ ಮೇಲೆ ಮೂರು ಬಾರಿ ದಾಳಿ ನಡೆದಿತ್ತು. ಆಗಲೇ ಅವರ ಮೇಲೆ ಪೊಲೀಸರು ಸೂಕ್ತ ಕ್ರಮಕೈಂಡಿದ್ದರೆ ಇಂತಹ ಘಟನೆ ಆಗುತ್ತಿರಲಿಲ್ಲ. ಕಾಕತಿ ಪೊಲೀಸ್ ಠಾಣೆಯಲ್ಲಿ ಬಹಳ ವರ್ಷಗಳಿಂದ ಪೊಲೀಸರು ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹೀಗಾಗಿ ಜನರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇವಲ 12 ಜನರಷ್ಟೇ ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾರ್ಯವೈಖರಿ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಮುಂದಾದ ಗ್ರಾ.ಪ ಅಧ್ಯಕ್ಷೆ
Advertisement
Advertisement
ಸೂಕ್ತ ತನಿಖೆ ನಡೆಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು. ಗ್ರಾಮದಲ್ಲಿ ಅಮಾಯಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಗೌಂಡವಾಡ ಗ್ರಾಮಸ್ಥರು ಭಯ ಪಡುವ ಅವಶ್ಯಕತೆ ಇಲ್ಲ. ತೊಂದರೆ ಆಗದಂತೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಲಾಗುವುದು. ಸತೀಶ್ ಪಾಟೀಲ್ ಕುಟುಂಬಸ್ಥರಿಗೆ ನ್ಯಾಯ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Advertisement
ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ಅಮಾಯಕರನ್ನು ಬಂಧಿಸಲಾಗುತ್ತಿದೆ. ಪೊಲೀಸರು ಮತ್ತು ಆರೋಪಿಗಳಿಂದ ನಮಗೆ ಜೀವ ಭಯ ಇದೆ ಎಂದು ಗೌಂಡವಾಡ ಗ್ರಾಮಸ್ಥರು ಸತೀಶ್ ಜಾರಕಿಹೊಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಗ್ರಾಮದಿಂದ ನೇರವಾಗಿ ಕಮಿಷನರ್ ಕಚೇರಿಗೆ ತೆರಳಿದ ಸತೀಶ್ ಜಾರಕಿಹೊಳಿ ಅಮಾಯಕರನ್ನು ಟಚ್ ಮಾಡದಂತೆ ಪೊಲೀಸರಿಗೆ ವಾರ್ನಿಂಗ್ ನೀಡಿದ್ದಾರೆ. ಈ ವೇಳೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ ಅವರೊಂದಿಗೆ ಅರ್ಧ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು. ಅಮಾಯಕರನ್ನು ಯಾವುದೇ ಕಾರಣಕ್ಕೂ ಬಂಧಿಸಬೇಡಿ. ಉಳಿದ ಕೊಲೆ ಆರೋಪಿಗಳನ್ನು ಅರೆಸ್ಟ್ ಮಾಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್